ADVERTISEMENT

ತಮ್ಮ ಮನೆಯಲ್ಲೇ ಇದೆಲ್ಲಾ ನಡೆಯುವಾಗ ನಿದ್ದೆ ಮಾಡ್ತಿದ್ರಾ?: ಯುವ ಪತ್ನಿ ಶ್ರೀದೇವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಜುಲೈ 2025, 13:00 IST
Last Updated 30 ಜುಲೈ 2025, 13:00 IST
<div class="paragraphs"><p>ಶ್ರೀದೇವಿ ಬೈರಪ್ಪ</p></div>

ಶ್ರೀದೇವಿ ಬೈರಪ್ಪ

   

 (ಇನ್‌ಸ್ಟಾಗ್ರಾಮ್‌ ಚಿತ್ರ)

ಬೆಂಗಳೂರು: ಮಾಧ್ಯಮಗಳಲ್ಲಿ ಮಹಿಳೆಯನ್ನು ಅವಮಾನಿಸುವುದರ ವಿರುದ್ಧ ಮಾತಾಡುವುದನ್ನು ನೋಡುವಾಗ, ತಮ್ಮ ಕುಟುಂಬದಲ್ಲೇ ಇದೆಲ್ಲಾ ನಡೆಯುವಾಗ ಮಾತಾಡದೇ ಸುಮ್ಮನೆ ಇದ್ರಲ್ಲ, ಆವಾಗ ನಿದ್ದೆ ಮಾಡ್ತಾ ಇದ್ರ ಎಲ್ಲಾ?' ಎಂದು ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ಪ್ರಶ್ನಿಸಿದ್ದಾರೆ.

ADVERTISEMENT

ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ನಗರ ಪೊಲೀಸ್ ಕಮಿಷನರ್‌ ಸೀಮಂತ್‌ ಕುಮಾರ್ ಸಿಂಗ್‌ ಅವರಿಗೆ ಸೋಮವಾರ ಲಿಖಿತ ದೂರು ನೀಡಿದ್ದಾರೆ.

ಈ ನಡುವೆ ರಮ್ಯಾ ಪರವಾಗಿ ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್‌ ಹಾಗೂ ವಿನಯ್ ರಾಜ್‌ಕುಮಾರ್‌ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಕಿರುಕುಳ ಹಾಗೂ ನಿಂದನೆಯನ್ನು ಬಹಿರಂಗವಾಗಿ ಖಂಡಿಸಿದ್ದರು. ಈ ಬಗ್ಗೆ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ಪ್ರತಿಕ್ರಿಯಿಸಿದ್ದಾರೆ.

'ರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ. ಯಾವ ಮಹಿಳೆಯ ವಿರುದ್ಧವೂ ಆ ರೀತಿ ಮಾತನಾಡುವುದು ಸರಿಯಲ್ಲ; ಅದನ್ನು ನಾವು ಸಹಿಸಬಾರದು. ಮಹಿಳೆಯರನ್ನು ತಾಯಿಯಾಗಿ, ಅಕ್ಕನಾಗಿ, ಮಗಳಾಗಿ, ಮಡದಿಯಾಗಿ ಮತ್ತು ಮೊಟ್ಟಮೊದಲು ಒಬ್ಬ ವ್ಯಕ್ತಿಯಾಗಿ ಗೌರವಿಸುವುದು ತುಂಬಾ ಮುಖ್ಯ' ಎಂದು ಶಿವರಾಜಕುಮಾರ್‌–ಗೀತಾ ದಂಪತಿ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

'ಸಾಮಾಜಿಕ ಮಾಧ್ಯಮ ತುಂಬಾ ಬಲಿಷ್ಠವಾದ ಅಸ್ತ್ರ, ಅದನ್ನು ತಮ್ಮ ಏಳಿಗೆಗಾಗಿ ಬಳಸಬೇಕೇ ಹೊರತು, ಅವಾಚ್ಯ ಶಬ್ದಗಳಿಂದ ನಿಂದಿಸಿ, ದ್ವೇಷ- ಅಸೂಯೆಯನ್ನು ಬಿತ್ತಲು ಬಳಸಬಾರದು. ನಿಮ್ಮ ನಿಲುವು ಸರಿಯಿದೆ, ರಮ್ಯಾ. ನಿಮ್ಮ ಜೊತೆಗೆ ನಾವು ಸದಾ ನಿಲ್ಲುತ್ತೇವೆ' ಎಂದೂ ಬೆಂಬಲ ವ್ಯಕ್ತಪಡಿಸಿದ್ದಾರೆ.

'ಯಾವುದೇ ರೀತಿಯ ಕಿರುಕುಳದ ವಿರುದ್ಧ ನಿಲ್ಲುವುದು ನಮ್ಮ ಕರ್ತವ್ಯ. ಹೆಣ್ಮಕ್ಕಳನ್ನು ಕೀಳಾಗಿ ಕಾಣೋ ಪ್ರಪಂಚ ಬೆಳವಣಿಗೆಗೂ ಮುನ್ನ ನಾಶವಾಗಬೇಕು' ಎಂದು ವಿನಯ್​ ರಾಜ್​​ಕುಮಾರ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಅವರ ಪೋಸ್ಟ್‌ ಅನ್ನು ಹಂಚಿಕೊಂಡಿರುವ ಶ್ರೀದೇವಿ 'ಎಲ್ಲಿದ್ದಪ್ಪ' ಎಂದೂ ಪ್ರಶ್ನಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.