ಬೆಂಗಳೂರು: ‘ಸಂಜು ವೆಡ್ಸ್ ಗೀತಾ 2’ ಸಿನಿಮಾಗೆ ರಚಿತಾ ರಾಮ್ ನಾಯಕಿಯಾಗಿ ಚಿತ್ರ ತಂಡ ಸೇರಿಕೊಂಡಿದ್ದಾರೆ.
ಈ ಬಗ್ಗೆ ರಚಿತಾ ರಾಮ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಮೊದಲ ಭಾಗದಲ್ಲಿ ನಾಯಕಿಯಾಗಿದ್ದ ರಮ್ಯಾ ಈ ಚಿತ್ರದಲ್ಲಿ ನಟಿಸುತ್ತಿಲ್ಲ ಎಂಬುದನ್ನು ಚಿತ್ರತಂಡ ಹೇಳಿದೆ.
ಈ ಚಿತ್ರದ ನಾಯಕರಾಗಿ ಶ್ರೀನಗರ ಕಿಟ್ಟಿ ಮುಂದುವರೆದಿದ್ದಾರೆ. ನಾಗಶೇಖರ್ ಅವರೇ ನಿರ್ದೇಶನ ಮಾಡುತ್ತಿದ್ದು ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಚಿತ್ರ 2024ರ ದಸರಾಗೆ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಕಾಂಬಿನೇಷನ್ ಜನರಿಗೆ ಇಷ್ಟವಾಗಿತ್ತು. ರಮ್ಯಾ ಅವರೇ ಈ ಚಿತ್ರದಲ್ಲೂ ಮುಂದುವರಿಯಬೇಕು ಎಂಬುದು ಅಭಿಮಾನಿಗಳು ಬಯಸಿದ್ದರು. ಆದರೆ ಈ ಚಿತ್ರದಿಂದ ರಮ್ಯಾ ಹೊರಬಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.