ರಣವೀರ್ ಸಿಂಗ್ ನಟನೆಯ ‘ಧರುಂಧರ್‘ ಚಿತ್ರವು ಚಿತ್ರಮಂದಿರದಲ್ಲಿ ನಿನ್ನೆ (ಶುಕ್ರವಾರ) ಬಿಡುಗಡೆಯಾಗಿ ಒಂದು ದಿನದಲ್ಲಿ ₹20 ಕೋಟಿ ಗಳಿಸಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.
ಕೆಲ ದಿನಗಳ ಹಿಂದೆ ರಣವೀರ್ ಸಿಂಗ್ , ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಕಾರ್ಯಕ್ರಮದಲ್ಲಿ 'ಕಾಂತಾರ' ಚಿತ್ರದಲ್ಲಿನ 'ದೈವ' ಸಂಪ್ರದಾಯವನ್ನು ಅಪಹಾಸ್ಯ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದರು. ಬಳಿಕ,ರಣವೀರ್ ಸಿಂಗ್ ಸಿನಿಮಾಗಳನ್ನು ಕರ್ನಾಟಕದಲ್ಲಿ ಬಹಿಷ್ಕರಿಸ ಬೇಕು ಎಂದು ಕೆಲವರು ಆಗ್ರಹಿಸಿದ್ದರು.
ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಂತೆ, ನಟ ರಣವೀರ್ ಸಿಂಗ್ ಸಾಮಾಜಿಕ ಮಾಧ್ಯಮದಲ್ಲಿ ಕ್ಷಮೆ ಕೋರಿದ್ದರು.
ಧುರಂದರ್ ಸಿನಿಮಾದಲ್ಲಿ ರಣ್‌ವೀರ್ ಸಿಂಗ್, ಸಂಜಯ್ ದತ್, ಅಕ್ಷಯ ಖನ್ನಾ, ಆರ್. ಮಾಧವನ್, ಅರ್ಜುನ್ ರಾಂಪಾಲ್, ಸಾರಾ ಅರ್ಜುನ್ ಸೇರಿ ಹಲವರು ಕಾಣಿಸಿಕೊಂಡಿದ್ದಾರೆ.
ಆದಿತ್ಯ ಧರ್ ಅವರು 'ಧುರಂಧರ್' ಚಿತ್ರವನ್ನು ಬರೆದು ನಿರ್ದೇಶಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.