
ರಣವೀರ್ ಸಿಂಗ್
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. 2025ರಲ್ಲಿ ಧುರಂಧರ್ ಸಿನಿಮಾ ಭಾರಿ ಯಶಸ್ಸು ಕಂಡಿತ್ತು. ಈ ಸಿನಿಮಾದಲ್ಲಿ ರಣವೀರ್ ಸಿಂಗ್ ಜೊತೆಗೆ ಖಳನಟ ಅಕ್ಷಯ್ ಖನ್ನಾ ಅವರು ಗಮನ ಸೆಳೆದಿದ್ದರು.
ಭಾರತದಲ್ಲಿ ₹831 ಕೋಟಿಗೂ ಹೆಚ್ಚು ಗಳಿಸುವ ಮೂಲಕ, ಭಾರತೀಯ ಚಿತ್ರರಂಗದಲ್ಲಿ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಎಂದೆನಿಸಿಕೊಂಡಿತ್ತು. ಈಗ ಧುರಂದರ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ಜಿಯೋ ಸ್ಟುಡಿಯೋಸ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಧುರಂಧರ್ 2 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಟೀಸರ್‌ನಲ್ಲಿ ಯಾವುದೇ ಸಂಭಾಷಣೆ ಇಲ್ಲ. ಬದಲಾಗಿ ಸಂಗೀತದಲ್ಲೇ ತುಣುಕನ್ನು ಹಾಕಲಾಗಿದೆ. ಜೊತೆಗೆ ಚಿಕ್ಕ ಹುಡುಗನ ಲುಕ್‌ನಲ್ಲಿ ರಣವೀರ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವು ರಾಜಕೀಯ, ಭಯೋತ್ಪಾದಕ ಚಟುವಟಿಕೆಗಳು ಹಾಗೂ ಗುಪ್ತಚರ ಕಾರ್ಯಾಚರಣೆಯನ್ನು ಒಳಗೊಂಡಿದೆ. ಆದಿತ್ಯಧರ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಸಂಜಯ್ ದತ್, ಅರ್ಜುನ್ ರಾಮ್ಪಾಲ್ ಮುಂತಾದವರು ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.