ADVERTISEMENT

Dhurandhar | ರಣವೀರ್ ಸಿಂಗ್ ನಟನೆಯ ‘ಧುರಂಧರ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2025, 9:47 IST
Last Updated 6 ಜುಲೈ 2025, 9:47 IST
<div class="paragraphs"><p>‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್</p></div>

‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್

   

Credit: YouTube/@JioStudios

ಮುಂಬೈ: ಬಾಲಿವುಡ್‌ ನಟ ರಣವೀರ್ ಸಿಂಗ್ ಅವರು ಇಂದು (ಭಾನುವಾರ) 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಪ್ರಯುಕ್ತ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಹಾರೈಸಿದ್ದಾರೆ.

ADVERTISEMENT

ರಣವೀರ್ ಸಿಂಗ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಬಹುನಿರೀಕ್ಷಿತ ‘ಧುರಂಧರ್’ ಚಿತ್ರದ ಫಸ್ಟ್ ಲುಕ್ ವಿಡಿಯೊ ಬಿಡುಗಡೆ ಮಾಡಿದೆ. 2019ರಲ್ಲಿ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರ ನಿರ್ದೇಶಿಸಿದ್ದ ಆದಿತ್ಯ ಧರ್‌ ಅವರೇ ‘ಧುರಂಧರ್’ ಚಿತ್ರಕ್ಕೂ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರದಲ್ಲಿ ಪೂರ್ಣ ಪ್ರಮಾಣದ ಪಾತ್ರದೊಂದಿಗೆ ರಣವೀರ್ ದೊಡ್ಡ ಪರದೆಗೆ ಮರಳಿದ್ದಾರೆ.

‘ಧುರಂಧರ್’ ಚಿತ್ರದಲ್ಲಿ ರಣವೀರ್ ಸಿಂಗ್ ಜತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ.

‘ಧುರಂಧರ್’ ಚಿತ್ರ ಡಿಸೆಂಬರ್‌ 5ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.