ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ನಟ ರಣವೀರ್ ಸಿಂಗ್
(ಚಿತ್ರ ಕೃಪೆ– ಇನ್‌ಸ್ಟಾಗ್ರಾಂ)
ನವದೆಹಲಿ: ಬಾಲಿವುಡ್ ಸ್ಟಾರ್ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್ ಅವರು ಅಮೃತಸರದ ಸ್ವರ್ಣ ಮಂದಿರದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು.
ಇಬ್ಬರೂ ತಮ್ಮ ಮುಂಬರುವ ಚಿತ್ರದ 2ನೇ ಹಂತದ ಶೂಟಿಂಗ್ ಆರಂಭಿಸುವ ಮೊದಲು ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದಾರೆ.
ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ನಟ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್
ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ ವೇಳೆ ರಣವೀರ್ ಸಿಂಗ್ ಅವರೊಂದಿಗೆ ತೆಗೆದ ಫೋಟೊಗಳನ್ನು ಆದಿತ್ಯ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ನಟ ರಣವೀರ್ ಸಿಂಗ್ ಹಾಗೂ ನಿರ್ದೇಶಕ ಆದಿತ್ಯ ಧರ್
ಆದಿತ್ಯ ಅವರ ನಿರ್ದೇಶನದ ಇನ್ನೂ ಹೆಸರಿಡದ ಚಿತ್ರದಲ್ಲಿ ಸಂಜಯ್ ದತ್, ಅಕ್ಷಯ್ ಖನ್ನಾ, ಅರ್ಜುನ್ ರಾಂಪಾಲ್ ಹಾಗೂ ಆರ್. ಮಾಧವನ್ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಸ್ವರ್ಣ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ ನಟ ರಣವೀರ್ ಸಿಂಗ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.