ಬೆಂಗಳೂರು: ಟೀಮ್ ಇಂಡಿಯಾ 1983ರಲ್ಲಿ ವಿಶ್ವಕಪ್ ಕ್ರಿಕೆಟ್ ಗೆದ್ದಿರುವ ರೋಚಕ ಕಥೆಯನ್ನು ಹೊಂದಿರುವ '83' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ.
ರಣವೀರ್ ಸಿಂಗ್ ಅವರು ವಿಶ್ವಕಪ್ ವಿಜೇತ ಟೀಮ್ ಇಂಡಿಯಾ ಕ್ಯಾಪ್ಟನ್ ಕಪಿಲ್ ದೇವ್ ಅವರ ಪಾತ್ರವನ್ನು ನಿರ್ವಹಿಸಲಿದ್ದಾರೆ.
ಚಿತ್ರದ ಕುರಿತಂತೆ ಈಗಾಗಲೇ ಬಾಲಿವುಡ್ ಮತ್ತು ಕ್ರಿಕೆಟ್ ಪ್ರೇಮಿಗಳಲ್ಲಿ ಅಪಾರ ನಿರೀಕ್ಷೆ ಸೃಷ್ಟಿಯಾಗಿದೆ.
83 ಚಿತ್ರದ ಟೀಸರ್ ಈಗಾಗಲೇ ಬಿಡುಗಡೆಯಾಗಿದೆ. ಚಿತ್ರದ ಹೊಸ ಪೋಸ್ಟರ್ ಅನ್ನು ರಣವೀರ್ ಸಿಂಗ್ ತಮ್ಮ ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.
ಡಿಸೆಂಬರ್ 24ರಂದು 83 ಸಿನಿಮಾ ಕನ್ನಡ ಸಹಿತ ಐದು ಪ್ರಮುಖ ಭಾಷೆಗಳಲ್ಲಿ ತೆರೆ ಕಾಣುತ್ತಿದೆ.
ಲಾರ್ಡ್ಸ್ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ರೋಚಕ ಫೈನಲ್ ಪಂದ್ಯವನ್ನು 83 ಸಿನಿಮಾದಲ್ಲಿ ತೋರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.