ADVERTISEMENT

ಚಿರಂಜೀವಿ ಸೊಸೆಯ ವೆಬ್‌ಸೈಟ್‌ಗೆ ರಶ್ಮಿಕಾ ಅತಿಥಿ ಸಂಪಾದಕಿ!

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 17:11 IST
Last Updated 10 ನವೆಂಬರ್ 2020, 17:11 IST
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ   

ತೆಲುಗಿನ ಖ್ಯಾತ ನಟ ಚಿರಂಜೀವಿ ಅವರ ಸೊಸೆ ಹಾಗೂ ರಾಮ್‌ಚರಣ್ ತೇಜ ಅವರ ಪತ್ನಿ ಉಪಾಸನಾ ಕಮಿನೇನಿ ಕೊನಿಡೇಲಾ ಅವರೀಗ ಆನ್ಲೈನ್ನಲ್ಲಿ ಹೊಸ ಸಾಹಸಕ್ಕೆ ಮುಂದಾಗಿದ್ದಾರೆ. ಅವರ ಆ ಸಾಹಸಕ್ಕೆ ಸದ್ಯ ಟ್ರೆಂಡಿಂಗ್ನಲ್ಲಿರುವ ಕನ್ನಡತಿ, ದಕ್ಷಿಣ ಭಾರತ ಖ್ಯಾತ ಚಿತ್ರತಾರೆ ರಶ್ಮಿಕಾ ಮಂದಣ್ಣ ಕೈ ಜೋಡಿಸಿದ್ದಾರೆ.

ಆರೋಗ್ಯ, ಲೈಫ್ಸ್ಟೈಲ್, ಮಾನಸಿಕ ಮತ್ತು ದೈಹಿಕ ಆರೋಗ್ಯ, ಪ್ರಸ್ತುತ ಟ್ರೆಂಡಿಂಗ್ ವಿಚಾರಗಳನ್ನು ಯೂಆರ್ಲೈಫ್ ಮೂಲಕ ಉಪಾಸನಾ ಹೇಳಹೊರಟಿದ್ದಾರೆ. URLife.co.in. ಎಂಬ ನೂತನ ವೆಬ್ಸೈಟ್ ತೆರೆದಿದ್ದು, ಮ್ಯಾನೇಜಿಂಗ್ ಡೈರೆಕ್ಟರ್ ಆಗಿ ಉಪಾಸನಾ ಉಸ್ತುವಾರಿ ವಹಿಸಿಕೊಂಡರೆ, ಈ ಹಬ್ಬದ ಸಮಯದಲ್ಲಿ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ.

ಅಂದಹಾಗೆ, URLife.co.in. ಎಂಬುದು ಒಂದು ಆರೋಗ್ಯಕರ ವೇದಿಕೆ. ಇಲ್ಲಿ ಆಯ್ದ ಕೆಲ ಕ್ಷೇತ್ರಗಳ ನುರಿತ ಪರಿಣತರು, ವೈದ್ಯರು ಲೈಫ್ಸ್ಟೈಲ್, ತಂತ್ರಜ್ಞಾನದ ಬಗ್ಗೆ ಈ ವೇದಿಕೆ ಮೂಲಕ ಮಾಹಿತಿ ಹಂಚಿಕೊಳ್ಳಲಿದ್ದಾರೆ. ಡಯಟ್ ಟಿಪ್ಸ್, ಉಚಿತ ತರಗತಿಗಳು, ಆರೋಗ್ಯಕ್ಕೆ ಸಂಬಂಧಿಸಿದ ಮಾಹಿತಿಯೂ ಬೆರಳ ತುದಿಯಲ್ಲಿಯೇ ಈ ವೆಬ್‌ಸೈಟ್‌ನಲ್ಲಿ ಒದಗಿಸುವುದು ಉಪಾಸನಾ ಅವರ ಉದ್ದೇಶ.

ADVERTISEMENT

ಈ ವೆಬ್‌ಸೈಟ್‌ಗೆ ಈ ಸಲದ ಅತಿಥಿ ಸಂಪಾದಕಿಯಾಗಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳಲಿದ್ದಾರೆ. ರಶ್ಮಿಕಾ ಅವರನ್ನು ಈ ಜವಾಬ್ದಾರಿಗೆ ಆರಿಸಿಕೊಳ್ಳಲು ಕಾರಣವಾದ ಒಂದಷ್ಟು ಅಂಶಗಳನ್ನು ಸ್ವತಃ ಉಪಾಸನಾ ಹೇಳಿಕೊಂಡಿದ್ದಾರೆ. ‘ರಶ್ಮಿಕಾ ಸದಾ ನಗುಮೊಗದ ಮತ್ತು ಪಾಸಿಟಿವ್ ವೈಬ್ ಅನ್ನು ತನ್ನೊಳಗೆ ಇಟ್ಟುಕೊಂಡಿರುವ ನಟಿ. ಕೋಟ್ಯಂತರ ಯುವ ಪೀಳಿಗೆಯ ನೆಚ್ಚಿನ ನಟಿಯಾಗಿ ಗುರುತಿಸಿಕೊಳ್ಳುವುದರ ಜತೆಗೆ ನಗುವಿನ ಮೂಲಕವೇ ಆರೋಗ್ಯಕರ ಸಂದೇಶ ನೀಡುತ್ತಿದ್ದಾರೆ. ಅದು URLife.co.in.ನಲ್ಲಿಯೂ ಮುಂದುವರಿಯಲಿದೆ’ ಎಂಬುದು ಉಪಾಸನಾ ಮಾತು.

ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ 10 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿರುವ ರಶ್ಮಿಕಾ, ಸದ್ಯ ದಕ್ಷಿಣ ಭಾರತೀಯ ಸಿನಿಮಾ ರಂಗದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಆರೋಗ್ಯಕರ ಜೀವನಶೈಲಿ ರೂಢಿಸಿಕೊಂಡು, ಅದೆಷ್ಟೋ ಯುವಕ ಯುವತಿಯರ ಹಾಟ್ ಫೇವರಿಟ್ ನಟಿಯಾಗಿದ್ದಾರೆ. ಸೇವಿಸುವ ಆಹಾರ ಮತ್ತು ವ್ಯಾಯಾಮ, ಯೋಗದ ಬಗ್ಗೆಯೂ ತಮ್ಮ ಅಭಿಮಾನಿಗಳಿಗೆ ಆಗಾಗ ಮಾಹಿತಿ ನೀಡುತ್ತಿರುತ್ತಾರೆ.

ರಶ್ಮಿಕಾ ಅವರ ಲೈಫ್‌ ಸ್ಟೈಲ್‌ ಮತ್ತು ಆರೋಗ್ಯಕರ ಜೀವನದ ಗುಟ್ಟನ್ನು URLife.co.in ಬಿಚ್ಚಿಡಲಿದೆಯಂತೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.