ADVERTISEMENT

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಫೆಬ್ರುವರಿ 2026, 6:16 IST
Last Updated 26 ಫೆಬ್ರುವರಿ 2026, 6:16 IST
<div class="paragraphs"><p>ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣ</p></div>

ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣ

   

ಚಿತ್ರ: ಇನ್‌ಸ್ಟಾಗ್ರಾಂ

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‌ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು (ಫೆ.26) ಉದಯಪುದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಜನಪ್ರಿಯ ಜೋಡಿಯು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದರು.

ADVERTISEMENT

ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ

ವಿಜಯ್ ದೇವರಕೊಂಡ–ರಶ್ಮಿಕಾ ಮಂದಣ್ಣಇತ್ತೀಚೆಗೆ ತಮ್ಮ ವಿವಾಹದ ಕುರಿತು ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದರು. ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮದುವೆ ಆಮಂತ್ರಣದ ಫೋಟೊವನ್ನು ಹಂಚಿಕೊಂಡಿದ್ದರು. ಒಂದೊಂದಾಗಿ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಮದುವೆಯ ಕ್ಷಣಗಳನ್ನು ಸಂಭ್ರಮಿಸಿದ್ದಾರೆ.

ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ನಡೆದ ಈ ಜೋಡಿಯ ಮದುವೆಗೆ ಕೆಲವು ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಸೇರಿದಂತೆ 100 ಅತಿಥಿಗಳು ಮಾತ್ರ ಆಗಮಿಸಿದ್ದರು ಎಂದು ವರದಿಯಾಗಿದೆ. ಸದ್ಯ ಮದುವೆಯ ಫೋಟೊಗಳಿಗಾಗಿ ವಿರೋಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.