ADVERTISEMENT

‘ಮಿಷನ್ ಮಜ್ನು’ ಜೂನ್‌ 10ರಂದು ತೆರೆಗೆ: ಸಿದ್ದಾರ್ಥ್‌–ರಶ್ಮಿಕಾ ಅಭಿನಯದ ಚಿತ್ರ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2022, 7:52 IST
Last Updated 9 ಮಾರ್ಚ್ 2022, 7:52 IST
ಸಿದ್ದಾರ್ಥ್‌–ರಶ್ಮಿಕಾ
ಸಿದ್ದಾರ್ಥ್‌–ರಶ್ಮಿಕಾ   

ಟಾಲಿವುಡ್‌ನಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಅವರ ಬಾಲಿವುಡ್‌ ‘ಮಿಷನ್ ಮಜ್ನು’ ಸಿನಿಮಾ ಜೂನ್‌ 10ರಂದು ಚಿತ್ರಮಂದಿರಗಳಲ್ಲಿ ತೆರೆಗೆ ಬರಲಿದೆ.

ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಣೆ ಮಾಡಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಡಬ್ಬಿಂಗ್‌ ಹಾಗೂ ಎಡಿಟಿಂಗ್ ಕೆಲಸಗಳು ಅಂತಿಮ ಹಂತದಲ್ಲಿ ನಡೆಯುತ್ತಿವೆ ಎಂದು ಚಿತ್ರತಂಡ ಹೇಳಿದೆ.

ರಶ್ಮಿಕಾ ನಟನೆಯ ಮೊದಲ ಬಾಲಿವುಡ್ ಚಿತ್ರ ಇದಾಗಿದೆ. ಸಿನಿಮಾ ಬಿಡುಗಡೆಯ ಬಗ್ಗೆ ರಶ್ಮಿಕಾ ಸಹ ಟ್ವೀಟ್ ಮಾಡಿದ್ದಾರೆ. ಈ ಚಿತ್ರದಲ್ಲಿ ಸಿದ್ಧಾರ್ಥ ಮಲ್ಹೋತ್ರಾ ನಾಯಕ ಪಾತ್ರದಲ್ಲಿ ನಟಿಸಿದ್ದಾರೆ.

ಶಂತನು ಬಾಗ್ಚಿ ಅವರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಪರ್ಮೀತ್ ಸೇಠಿ, ಝಾಕಿರ್ ಹುಸೇನ್, ಶರೀಬ್ ಹಷ್ಮಿ ಸೇರಿದಂತೆ ಹಲವರು ನಟಿಸಿದ್ದಾರೆ.

ಮಿಷನ್‌ ಮಜ್ನು ಸಿನಿಮಾವನ್ನು ರೂನಿ ಸೋಲಿ, ಅಮರ್ ಬುಟಾಲಾ ಹಾಗೂ ಗರಿಮಾ ಮೆಹ್ತಾ ನಿರ್ಮಾಣ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.