ADVERTISEMENT

‘ಪುಷ್ಪ' ಪೋಸ್ಟರ್: ಅಲ್ಲು ಅರ್ಜುನ್‌ಗೆ ’ಶ್ರೀವಲ್ಲಿ’ಯಾಗಿ ಬಂದ ರಶ್ಮಿಕಾ ಮಂದಣ್ಣ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2021, 5:40 IST
Last Updated 29 ಸೆಪ್ಟೆಂಬರ್ 2021, 5:40 IST
ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ   

ಅಲ್ಲು ಅರ್ಜುನ್‌ ನಾಯಕರಾಗಿ ನಟಿಸುತ್ತಿರುವ ‘ಪುಷ್ಪ’ ಸಿನಿಮಾದಲ್ಲಿ ನಾಯಕಿಯಾಗಿರುವರಶ್ಮಿಕಾ ಮಂದಣ್ಣ ’ಶ್ರೀವಲ್ಲಿ’ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

‘ಪುಷ್ಪ’ ಚಿತ್ರತಂಡವು ರಶ್ಮಿಕಾ ಮಂದಣ್ಣ ಅವರ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆ ಮಾಡಿದೆ. ಹಳ್ಳಿ ಹುಡುಗಿ ಪಾತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ ನೋಡಿದರೆ ರಶ್ಮಿಕಾ ವಿಭಿನ್ನ ಪಾತ್ರ ಮಾಡುತ್ತಿರುವುದು ಗೊತ್ತಾಗುತ್ತದೆ.

‘ಆರ್ಯ’ ಹಾಗೂ ‘ಆರ್ಯ 2’ ಚಿತ್ರಗಳನ್ನು ನಿರ್ದೇಶಿಸಿದ್ದ ಸುಕುಮಾರ್‌ ನಿರ್ದೇಶನದ ಈ ಚಿತ್ರವು ತೆಲುಗು, ಕನ್ನಡ, ಮಲಯಾಳಂ, ಹಿಂದಿ, ತಮಿಳು ಭಾಷೆಯಲ್ಲಿ ತೆರೆಕಾಣಲಿದೆ.

ADVERTISEMENT

ರಕ್ತಚಂದನ ಚೋರರ ಕಥೆಯುಳ್ಳ ಈಸಿನಿಮಾ ಭಾರತದ ಬಹು ನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಸ್ಥಾನಪಡೆದಿದೆ.

ಚಿತ್ರದಲ್ಲಿ ಪ್ರಕಾಶ್‌ ರಾಜ್‌, ಜಗಪತಿ ಬಾಬು, ಡಾಲಿ ಧನಂಜಯ, ಪಹಾದ್‌ ಪಾಸಿಲ್‌, ವೆನ್ನೆಲಾ ಕಿಶೋರ್‌ ಸೇರಿದಂತೆ ಮುಂತಾದವರು ಪಾತ್ರ ನಿರ್ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.