ADVERTISEMENT

ವಿವಾಹಪೂರ್ವ ಸಂಭ್ರಮದಲ್ಲಿ ರಶ್ಮಿಕಾ–ವಿಜಯ್; ಮೋಜುಮಸ್ತಿಯಲ್ಲಿ ತಾರಾ ಜೋಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಫೆಬ್ರುವರಿ 2026, 6:24 IST
Last Updated 24 ಫೆಬ್ರುವರಿ 2026, 6:24 IST
<div class="paragraphs"><p>ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ</p></div>

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ

   

ಚಿತ್ರ: ಇನ್‌ಸ್ಟಾಗ್ರಾಂ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‌ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಈಗಾಗಲೇ ಈ ಜೋಡಿ ಉದಯಪುರಕ್ಕೆ ತಲುಪಿದ್ದಾರೆ. ಇಬ್ಬರು ವಿಮಾನ ನಿಲ್ದಾಣಕ್ಕೆ ಬಂದಿದ್ದ ಫೋಟೊಗಳು ಹಾಗೂ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ವರದಿ ಪ್ರಕಾರ, ಫೆಬ್ರುವರಿ 26ರಂದು ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ‌

ADVERTISEMENT

ಇತ್ತೀಚೆಗೆ ಮದುವೆ ಬಗ್ಗೆ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದರು. ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಮದುವೆ ಆಮಂತ್ರಣದ ಫೋಟೊವನ್ನು ಹಂಚಿಕೊಂಡಿದ್ದರು. ಆ ಬೆನ್ನಲ್ಲೆ ಈಗ ಮದುವೆಗೂ ಮೊದಲೇ ಈಜುಕೊಳದ ಪಾರ್ಟಿ ಮಾಡುತ್ತಿದ್ದಾರೆ. ವಿಜಯ್ ದೇವರಕೊಂಡ ತಮ್ಮ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಈಜುಕೊಳದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಇತ್ತ, ರಶ್ಮಿಕಾ ಮಂದಣ್ಣ ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಊಟದ ಟೇಬಲ್ ಮೇಲೆ ಪತ್ರವನ್ನು ಇಟ್ಟು, ಅದರ ಸುತ್ತ ಕೆಂಪು ಗುಲಾಬಿಗಳು, ಹೂವುಗಳನ್ನು ಜೋಡಿಸಿ, ತಾಜಾ ಹಣ್ಣುಗಳಿಂದ ಅಲಂಕಾರ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಫೋಟೊ ನೋಡಿರುವ ಅಭಿಮಾನಿಗಳು ಇಬ್ಬರಿಗೂ ಶುಭಕೋರುತ್ತಿದ್ದಾರೆ.

ರಶ್ಮಿಕಾ ಮಂದಣ್ಣ

ಈಗಾಗಲೇ ಮದುವೆಗೆ ಆಯ್ಕೆ ಮಾಡಿಕೊಂಡ ಉದಯಪುರದ ಐಟಿಸಿ ಮೆಮೆಂಟೋಸ್‌ ಸ್ಥಳದ ಸುತ್ತಮುತ್ತ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಮೂರು ದಿನಗಳ ಕಾಲ ನಡೆಯುವ ಈ ಮದುವೆಗೆ ಕೆಲ ಸೆಲೆಬ್ರಿಟಿಗಳು, ರಾಜಕೀಯ ನಾಯಕರು ಹಾಗೂ 100 ಅತಿಥಿಗಳನ್ನು ಆಹ್ವಾನಿಸಲಾಗಿದೆ. ಎರಡೂ ಕುಟುಂಬಗಳು ಮತ್ತು ಆಪ್ತ ಸ್ನೇಹಿತರು ಇದರಲ್ಲಿ ಭಾಗವಹಿಸಲಿದ್ದಾರೆ.

ವಿಜಯ್ ದೇವರಕೊಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.