
ರಶ್ಮಿಕಾ, ವಿಜಯ್ ದೇವರಕೊಂಡ
ಇನ್‌ಸ್ಟಾಗ್ರಾಂ ಚಿತ್ರ
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಫೆಬ್ರುವರಿ 26ರಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಈ ಇಬ್ಬರದ್ದು ಎನ್ನುವ ಮದುವೆಯ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಜೋಡಿಯ ಮದುವೆಗೆ ಹೋಗುವ ಅತಿಥಿಗಳಿಗೆ ಕೆಲವೊಂದು ನಿಯಮಗಳನ್ನು ಹಾಕಿದ್ದಾರಂತೆ.
ಫೆಬ್ರುವರಿ 23ರಿಂದ ಉದಯಪುರದಲ್ಲಿ ಮದುವೆ ಸಮಾರಂಭಗಳು ಆರಂಭವಾಗಲಿದೆ ಎಂದು ವರದಿಯಾಗಿದ್ದು, ಈ ಜೋಡಿಯ ಮದುವೆಗೆ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರಿಗೆ ಮಾತ್ರ ಆಮಂತ್ರಣವಿದೆಯಂತೆ.
ಜತೆಗೆ ಮದುವೆಯಲ್ಲಿ ಭಾಗಿಯಾಗುವವರಿಗೆ ನಿಯಮಗಳನ್ನು ವಿಧಿಸಲಾಗಿದೆ. ಮದುವೆಗೆ ಬರುವ ಅತಿಥಿಗಳಿಗೆ ಫೋನ್ ಅನ್ನು ನಿಷೇಧಿಸಲಾಗಿದ್ದು, ಯಾವುದೇ ವಿಡಿಯೊ ಚಿತ್ರೀಕರಿಸಿಕೊಳ್ಳುವಂತಿಲ್ಲ ಎಂದು ಒಪ್ಪಂದಕ್ಕೆ ಸಹಿ ಹಾಕಿಸಿಕೊಂಡಿರುವುದಾಗಿ ಮೂಲಗಳು ತಿಳಿಸಿವೆ.
ಇದರ ಜೊತೆಗೆ ಮತ್ತೊಂದು ವಿಚಾರ ಕೂಡ ಹೊರಬಿದ್ದಿದೆ. ಏನೆಂದರೆ ರಶ್ಮಿಕಾ, ವಿಜಯ್ ಅವರ ಮದುವೆ ಯಾವುದೇ ವಿಘ್ನವಿಲ್ಲದೇ ನಡೆಯಲು ಅಂತರರಾಷ್ಟ್ರೀಯ ಭದ್ರತಾ ಸಂಸ್ಥೆಯನ್ನು ನೇಮಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆದರೆ, ಈ ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.