ADVERTISEMENT

‘ಕ್ಲಿಕ್‌’ನಲ್ಲಿ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 19:45 IST
Last Updated 10 ಜನವರಿ 2024, 19:45 IST
ಚಿತ್ರದ ಪೋಸ್ಟರ್‌
ಚಿತ್ರದ ಪೋಸ್ಟರ್‌   

ಸಂಗೀತ ನಿರ್ದೇಶಕ ರವಿ ಬಸ್ರೂರ್ ಪುತ್ರ ಮಾಸ್ಟರ್ ಪವನ್ ‘ಕ್ಲಿಕ್’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಅವರು ‘ಗಿರ್ಮಿಟ್’ ಚಿತ್ರದಲ್ಲಿ ಸಣ್ಣದೊಂದು ಪಾತ್ರ ನಿರ್ವಹಿಸಿದ್ದರು.

ಐಟಿ ಉದ್ಯೋಗಿಯಾಗಿರುವ ಶಶಿಕಿರಣ್ ತಮ್ಮದೇ ಶರಣ್ಯ ಫಿಲ್ಮ್ಸ್‌ನಡಿ ಕ್ಲಿಕ್ ಸಿನಿಮಾ ನಿರ್ಮಿಸಿ, ನಿರ್ದೇಶಿಸಿದ್ದಾರೆ. ‘ನಮ್ಮಲ್ಲಿ ಹೆಚ್ಚಿನ ಪೋಷಕರು ಮಕ್ಕಳು ಡಾಕ್ಟರ್-ಎಂಜಿನಿಯರ್ ಆಗಬೇಕು ಎಂದು ಬಯಸುತ್ತಾರೆ. ಆದರೆ ಈ ಎರಡು ವಲಯದ ಹೊರತಾಗಿ ನಮ್ಮ ಮುಂದೆ ತುಂಬಾ ಆಯ್ಕೆಗಳಿವೆ. ಮಕ್ಕಳ ಇಚ್ಛೆಗೆ ತಕ್ಕಂತೆ ಓದಲು, ಆಯ್ಕೆ ಮಾಡಲು ಬಿಡಬೇಕು ಎಂಬ ಸಂದೇಶ ಸಿನಿಮಾದಲ್ಲಿದೆ’ ಎಂದರು ನಿರ್ದೇಶಕ ಶಶಿಕಿರಣ್.

ಯುವ ನಟ ಕಾರ್ತಿಕ್, ಚಂದ್ರಕಲಾ ಮೋಹನ್, ರಚನಾ ದಶರತ್, ಸಂಜು ಬಸಯ್ಯ, ಸಿಲ್ಲಿಲಲ್ಲಿ ಆನಂದ್, ಸುಮನಾ ಶಶಿ ಸೇರಿದಂತೆ ಹಲವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಬೆಂಗಳೂರು, ಬಿಡದಿ ರಾಮನಗರ, ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಆಕಾಶ್ ಪರ್ವ-ವಿಶ್ವಾಸ್ ಕೌಶಿಕ್ ಸಂಗೀತ ನಿರ್ದೇಶನ, ಜೀವನ್ ಗೌಡ ಛಾಯಾಚಿತ್ರಗ್ರಹಣ, ವಿನಯ್ ಕುಮಾರ್ ಸಂಕಲನ ಚಿತ್ರಕ್ಕಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.