ADVERTISEMENT

‘ತ್ರಿವಿಕ್ರಮ’ನ ಯಾತ್ರೆಗೆ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 19:30 IST
Last Updated 9 ಜೂನ್ 2022, 19:30 IST
ತ್ರಿವಿಕ್ರಮವಿಕ್ರಂ, ಆಕಾಂಕ್ಷಾ ಶರ್ಮಾ
ತ್ರಿವಿಕ್ರಮವಿಕ್ರಂ, ಆಕಾಂಕ್ಷಾ ಶರ್ಮಾ   

ಕ್ರೇಜಿ಼ಸ್ಟಾರ್ ವಿ. ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ ‘ತ್ರಿವಿಕ್ರಮ’ ಚಿತ್ರೀಕರಣ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ ‘ತ್ರಿವಿಕ್ರಮ’ ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ ಚಿತ್ರ ಪ್ರದರ್ಶನಗೊಳ್ಳಲಿದೆ.

ಯೋಗರಾಜ್ ಭಟ್ ಅವರ ಸಾಹಿತ್ಯದ ‘ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...’ ಎಂಬ ಹಾಡಿನ ಚಿತ್ರೀಕರಣ ಮೋಹನ್ ಬಿ. ಕೆರೆ ಸ್ಟುಡಿಯೋದ ಸೆಟ್‌ನಲ್ಲಿ ಇತ್ತೀಚೆಗೆ ನಡೆಯಿತು. ಅರ್ಜುನ್ ಜನ್ಯ ಸಂಗೀತವಿರುವ ಈ ಹಾಡಿಗೆ ಭೂಷಣ್ ನೃತ್ಯ ನಿರ್ದೇಶನ ಮಾಡಿದ್ದಾರೆ. ವಿಕ್ರಮ್‌ಹಾಗೂ ಆಕಾಂಕ್ಷಾ ಶರ್ಮಾ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸುಮಾರು ನೂರು ದಿನಗಳ ಕಾಲ ಶೂಟಿಂಗ್‌ ನಡೆದಿದೆ.

‘ರೋಸ್’, ‘ಮಾಸ್ ಲೀಡರ್’ ಸಿನಿಮಾಗಳಿಗೆ ಆ್ಯಕ್ಷನ್ ಕಟ್ ಹೇಳಿರುವ ಸಹನಾ ಮೂರ್ತಿ ‘ತ್ರಿವಿಕ್ರಮ’ನಿಗೆ ನಿರ್ದೇಶನ ಮಾಡಿದ್ದಾರೆ. ಸೋಮಣ್ಣ ಟಾಕೀಸ್ ಬ್ಯಾನರ್ ಅಡಿಯಲ್ಲಿ ತಯಾರಾಗಿರುವ ಈ ಚಿತ್ರಕ್ಕೆ ರಾಮ್ಕೋ ಸೋಮಣ್ಣ ಬಂಡವಾಳ ಹೂಡಿದ್ದಾರೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಈಗಾಗಲೇ ಬಿಡುಗಡೆಯಾಗಿರುವ ‘ಪ್ಲೀಸ್ ಮಮ್ಮಿ’ ಟ್ರೆಂಡಿಂಗ್'ನಲ್ಲಿದೆ. ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದ ಈ ಹಾಡನ್ನು ವಿಜಯಪ್ರಕಾಶ್ ಹಾಡಿದ್ದಾರೆ.

ADVERTISEMENT

ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಮೊದಲಾದವರು ತಾರಾಗಣದಲ್ಲಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ.ಪ್ರಕಾಶ್ ಸಂಕಲನವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.