ರೇಣುಕಸ್ವಾಮಿ, ದರ್ಶನ್
ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ ದವೆ, ‘ಕಪಿಲ್ ಸಿಬಲ್ ಬೇರೊಂದು ಪ್ರಕರಣದ ಪರ ವಾದ ಮಂಡಿಸುತ್ತಿದ್ದಾರೆ. ಹೀಗಾಗಿ, ದರ್ಶನ್ ಪರ ನಾನು ವಾದ ಮಂಡಿಸುತ್ತೇನೆ. ಈ ಪ್ರಕರಣದ ಬಗ್ಗೆ ಅಧ್ಯಯನ ನಡೆಸಲು ಒಂದು ದಿನದ ಕಾಲಾವಕಾಶ ನೀಡಬೇಕು’ ಎಂದು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಆರ್.ಮಹಾದೇವನ್ ಅವರ ಪೀಠವನ್ನು ಕೋರಿದರು.
‘15 ನಿಮಿಷ ವಾದ ಮಂಡನೆಗೆ ಅವಕಾಶ ನೀಡಲಾಗುವುದು. ಉಳಿದ ದಾಖಲೆಗಳನ್ನು ಲಿಖಿತವಾಗಿ ಸಲ್ಲಿಸಿ’ ಎಂದು ಸೂಚಿಸಿದ ನ್ಯಾಯಪೀಠವು ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.