ADVERTISEMENT

ದಯವಿಟ್ಟು ದಯೆಯಿಂದಿರಿ...ನಟಿ ರಕ್ಷಿತಾ ಹೀಗೆ ಹೇಳಿದ್ದು ಯಾರಿಗೆ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಜುಲೈ 2025, 11:21 IST
Last Updated 28 ಜುಲೈ 2025, 11:21 IST
<div class="paragraphs"><p>ನಟಿ ರಕ್ಷಿತಾ</p></div>

ನಟಿ ರಕ್ಷಿತಾ

   

(ಇನ್‌ಸ್ಟಾಗ್ರಾಮ್‌ ಚಿತ್ರ)

ಬೆಂಗಳೂರು: ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಕಳುಹಿಸುತ್ತಿರುವ ದರ್ಶನ್‌ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕಿಡಿಕಾರಿದ್ದಾರೆ. ಇನ್ನು, ಈ ವಿಚಾರ ಸದ್ದು ಮಾಡುತ್ತಿದ್ದಂತೆ ರಕ್ಷಿತಾ ಪ್ರೇಮ್ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ADVERTISEMENT

ರಕ್ಷಿತಾ ಅವರು, ಯಾರನ್ನು ಉದ್ದೇಶಿಸಿ(ದರ್ಶನ್‌ ಅಭಿಮಾನಿಗಳು/ರಮ್ಯಾ) ಈ ಪೋಸ್ಟ್ ಹಾಕಿದ್ದಾರೆ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಪೋಸ್ಟ್‌ನಲ್ಲಿ ಏನಿದೆ?

ರಕ್ಷಿತಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಎರಡು ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೊದಲ ಪೋಸ್ಟ್‌ನಲ್ಲಿ, 'ನೀವು ಜನರ ಮಾನಸಿಕ ಆರೋಗ್ಯ ನೋಡಲು ಸಾಧ್ಯವಿಲ್ಲ. ದಯವಿಟ್ಟು ದಯೆಯಿಂದಿರಿ' ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ‌ಪೋಸ್ಟ್‌ನಲ್ಲಿ, 'ನಾನು ನಿಜವಾಗಿ ಏನು ವೈರಲ್‌ ಆಗೋದನ್ನ ನೋಡಲು ಬಯಸುತ್ತಿದ್ದೇನೆ ಗೊತ್ತಾ? 'Basic human decency' (ಮೂಲಭೂತವಾಗಿ ಮನುಷ್ಯನಿಗೆ ಇರಬೇಕಾದ ಸಭ್ಯತೆ)' ಎಂದು ರಕ್ಷಿತಾ ಬರೆದುಕೊಂಡಿದ್ದಾರೆ.

ರಕ್ಷಿತಾ ಅವರ ಈ ಪೋಸ್ಟ್‌ಗಳು ರಮ್ಯಾ ಅವರನ್ನು ಉದ್ದೇಶಿಸಿ ಬರೆದಿದ್ದೇ ಅಥವಾ ದರ್ಶನ್‌ ಅಭಿಮಾನಿಗಳ ವರ್ತನೆಗೆ ವ್ಯಕ್ತಪಡಿಸಿದ ಅಸಮಾಧಾನವೇ ಎಂಬುದನ್ನು ನೆಟ್ಟಿಗರು ಅವರದ್ದೇ ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

ರೇಣುಕಸ್ವಾಮಿ ಕುಟುಂಬದ ಪರ ನಿಂತ ನಟಿ ರಮ್ಯಾ ವಿರುದ್ಧ ದರ್ಶನ್ ಅಭಿಮಾನಿಗಳು ಕಿಡಿಕಾರುತ್ತಿದ್ದಾರೆ. ಸಾಮಾಜಿಕ ಮಾದ್ಯಮಗಳಲ್ಲಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ. ಈ ಬಗ್ಗೆ ಭಾನುವಾರ ಇನ್​ಸ್ಟಾಗ್ರಾಮ್‌ನಲ್ಲಿ ಸಂದೇಶ ಹಂಚಿಕೊಂಡಿದ್ದ ರಮ್ಯಾ, 'ರೇಣುಕಸ್ವಾಮಿ ಮಾಡಿದ್ದ ಸಂದೇಶಕ್ಕೂ ದರ್ಶನ್ ಅಭಿಮಾನಿಗಳು ಮಾಡುವ ಸಂದೇಶಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ಇಂತಹ ಸ್ತ್ರೀದ್ವೇಷದ ಮನಸ್ಥಿತಿಯ ಕಾರಣದಿಂದಲೇ ಸಮಾಜದಲ್ಲಿ ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ' ಎಂದು ಬರೆದುಕೊಂಡಿದ್ದರು.

ಕಾನೂನು ಕ್ರಮಕ್ಕೆ ಆಗ್ರಹ

ನಟಿ ರಮ್ಯಾ ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪ್ರಕಟಿಸಲಾಗುತ್ತಿದೆ. ಇದರಿಂದ ಮಹಿಳೆಯರ ಸ್ಥಾನಮಾನಕ್ಕೆ ಧಕ್ಕೆ ಆಗುತ್ತಿದೆ’ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ. 

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ಗೆ ಪತ್ರ ಬರೆದಿರುವ ಅವರು, ‘ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ರಮ್ಯಾ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುತ್ತಿರುವ ಅವಹೇಳನಕಾರಿ ಸಂದೇಶಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ರಮ್ಯಾ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.