ADVERTISEMENT

ಚಿತ್ರಮಂದಿರಗಳಲ್ಲಿ ಶೇ 100 ಆಸನಗಳ ಭರ್ತಿಗೆ ಅವಕಾಶ ನೀಡಿ: ಮುಖ್ಯಮಂತ್ರಿಗೆ ಮನವಿ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 12:58 IST
Last Updated 24 ಜುಲೈ 2021, 12:58 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಯೋಗ   

ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ 100 ಆಸನಗಳ ಭರ್ತಿಗೆ ಅವಕಾಶ ನೀಡಬೇಕೆಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದೆ.

ಮಂಡಳಿಯ ಅಧ್ಯಕ್ಷ ಡಿ.ಆರ್‌.ಜೈರಾಜ್‌ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದು, ‘ಜುಲೈ 19ರಿಂದ ಚಿತ್ರಮಂದಿರಗಳಲ್ಲಿ ಶೇ 50ರಷ್ಟು ಆಸನಗಳಿಗೆ ಸೀಮಿತಗೊಳಿಸಿ ಚಿತ್ರ ಪ್ರದರ್ಶನ ನಡೆಸಲು ಸರ್ಕಾರ ಅನುಮತಿ ನೀಡಿದೆ. ಇದರಿಂದ ಈಗಾಗಲೇ ಸಂಕಷ್ಟದಲ್ಲಿರುವ ಚಿತ್ರೋದ್ಯಮವು ಮತ್ತಷ್ಟು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಅಲ್ಲದೆ, ಶೇ 50ರಷ್ಟು ಚಿತ್ರ ಪ್ರದರ್ಶನಕ್ಕೆ ಅನುಮತಿ ನೀಡಿರುವುದರಿಂದ ದೊಡ್ಡ ಹೂಡಿಕೆಯ ಚಿತ್ರಗಳ ನಿರ್ಮಾಪಕರು ಸಹ ಚಿತ್ರ ಬಿಡುಗಡೆಗೆ ಮುಂದಾಗಿರುವುದಿಲ್ಲ’ ಎಂದು ಉಲ್ಲೇಖಿಸಿದೆ.

‘ಈಗಾಗಲೇ ತೆಲಂಗಾಣ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಅಲ್ಲಿನ ಚಿತ್ರಮಂದಿರಗಳಲ್ಲಿ ಶೇ 100ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ಕಲ್ಪಿಸಿದೆ. ರಾಜ್ಯದಲ್ಲಿ ಚಿತ್ರೋದ್ಯಮವು ಅದರಲ್ಲೂ ನಿರ್ಮಾಪಕರು, ವಿತರಕರು, ಪ್ರದರ್ಶಕರು ಸಾಕಷ್ಟು ನಷ್ಟವನ್ನು ಅನುಭವಿಸುತ್ತಿದ್ದು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಆದ್ದರಿಂದ ರಾಜ್ಯದ ಚಿತ್ರಮಂದಿರಗಳಲ್ಲೂ ಶೇ 100ರಷ್ಟು ಆಸನಗಳ ಭರ್ತಿಗೆ ಅವಕಾಶ ನೀಡಿ ಆದೇಶ ಹೊರಡಿಸಬೇಕು’ ಎಂದು ನಿಯೋಗವು ಮನವಿ ಪತ್ರದಲ್ಲಿ ಆಗ್ರಹಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.