ADVERTISEMENT

ನಟ ಸುಶಾಂತ್ ಸಹೋದರಿ ವಿರುದ್ಧ ದೂರು ದಾಖಲಿಸಿದ ರಿಯಾ ಚಕ್ರವರ್ತಿ

ಏಜೆನ್ಸೀಸ್
Published 7 ಸೆಪ್ಟೆಂಬರ್ 2020, 10:46 IST
Last Updated 7 ಸೆಪ್ಟೆಂಬರ್ 2020, 10:46 IST
ಎನ್‌ಸಿಬಿ ವಿಚಾರಣೆಗೆ ಹಾಜರಾಗುತ್ತಿರುವ ರಿಯಾ ಚಕ್ರವರ್ತಿ
ಎನ್‌ಸಿಬಿ ವಿಚಾರಣೆಗೆ ಹಾಜರಾಗುತ್ತಿರುವ ರಿಯಾ ಚಕ್ರವರ್ತಿ   

ಮುಂಬೈ: ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿದ್ದಾರೆಂದು ಆರೋಪಿಸಿ ಸುಶಾಂತ್ ಸಹೋದರಿ ವಿರುದ್ಧ ನಟಿ ರಿಯಾ ಚಕ್ರವರ್ತಿ ಮುಂಬೈನಲ್ಲಿ ದೂರು ದಾಖಲಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನಿಖೆ ಎದುರಿಸುತ್ತಿರುವ ರಿಯಾ ಚಕ್ರವರ್ತಿ ಅವರು ಸುಶಾಂತ್‌ ಸಹೋದರಿ ಪ್ರಿಯಾಂಕಾ ಸಿಂಗ್‌ ಮತ್ತು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಡಾ.ತರುಣ್ ಕುಮಾರ್ ಅವರು ನಕಲಿ ವೈದ್ಯಕೀಯ ದಾಖಲೆ ಸೃಷ್ಟಿಸಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

ಜೂನ್ 8 ರಂದು ಸುಶಾಂತ್‌ ಅವರು ಮುಂಬೈನಲ್ಲೇ ಇದ್ದರು. ಆದರೆ, ಅದೇ ದಿನದಂದು ದೆಹಲಿಯ ಆಸ್ಪತ್ರೆಯಲ್ಲಿ ಸುಶಾಂತ್‌ ಅವರು ವೈದ್ಯಕೀಯ ನೆರವು ಪಡೆದಿದ್ದರು ಎಂಬುದಾಗಿ ನಕಲಿ ದಾಖಲೆ ಸೃಷ್ಟಿಸಲಾಗಿದೆ ಎಂದು ರಿಯಾ ತಿಳಿಸಿದ್ದಾರೆ.

ADVERTISEMENT

ಜೂನ್ 8 ರಂದು ನಟ ಸುಶಾಂತ್‌ ಮತ್ತು ಅವರ ಸಹೋದರಿ ನಡುವೆ ನಡೆದವಾಟ್ಸಾಪ್ ಚಾಟ್‌ಗಳನ್ನು ಆಧರಿಸಿ ದೂರು ನೀಡಲಾಗಿದೆ. ಅದೇ ದಿನದಂದು ನಟಿ ರಿಯಾ ಚಕ್ರವರ್ತಿ ಸುಶಾಂತ್‌ ಅಪಾರ್ಟ್‌ಮೆಂಟ್‌ನಿಂದ ಹೊರಬಂದಿದ್ದರು ಎಂಬುದಾಗಿ ತಿಳಿದುಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.