ADVERTISEMENT

ಎನ್‌ಸಿಬಿ ಕಚೇರಿಯಿಂದ ಬೈಕಲಾ ಜೈಲಿಗೆ ರಿಯಾ ಚಕ್ರವರ್ತಿ

ಪಿಟಿಐ
Published 9 ಸೆಪ್ಟೆಂಬರ್ 2020, 5:44 IST
Last Updated 9 ಸೆಪ್ಟೆಂಬರ್ 2020, 5:44 IST
ರಿಯಾ
ರಿಯಾ   

ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆಯಿಂದ (ಎನ್‌ಸಿಬಿ) ಮಂಗಳವಾರ ಸಂಜೆ ಬಂಧನಕ್ಕೆ ಒಳಗಾಗಿದ್ದ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರನ್ನು ಎನ್‌ಸಿಬಿ ಕಚೇರಿಯಿಂದ ಬುಧವಾರ ಬೆಳಿಗ್ಗೆ ಬೈಕುಲಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ನಟ ಸುಶಾಂತ್‌ಸಿಂಗ್‌ ರಜಪೂತ್‌ ಸಾವಿನ ಪ್ರಕರಣದಲ್ಲಿ ಡ್ರಗ್ಸ್‌ ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದ್ದು ಈ ತಿಂಗಳ 22ರವರೆಗೆ ನ್ಯಾಯಾಂಗ ಬಂಧನದಲ್ಲಿ ವಿಚಾರಣೆ ಎದುರಿಸಬೇಕೆಂದು ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT