
ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ
‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರಕ್ಕೆ ದೊರೆತ ರಾಜ್ಯ ಚಲನಚಿತ್ರ ಪ್ರಶಸ್ತಿ
‘ಸ ಹಿ ಪ್ರಾ ಶಾಲೆ ಕಾಸರಗೋಡು’ ಸಿನಿಮಾವನ್ನು ರಿಷಬ್ ಶೆಟ್ಟಿ ಅವರು ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು.
ಮುಖ್ಯಮಂತ್ರಿ ಅವರಿಂದ ರಾಜ್ಯ ಚಲನಚಿತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ದಂಪತಿ
2018-19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳಲ್ಲಿ 'ಅತ್ಯುತ್ತಮ ಮನರಂಜನಾ ಚಿತ್ರ' ಮತ್ತು 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿಯನ್ನು ಈ ಚಿತ್ರ ಪಡೆದುಕೊಂಡಿದೆ.
ಹಿರಿಯ ನಟ ಅನಂತನಾಗ್, ಪ್ರಮೋದ್ ಶೆಟ್ಟಿ, ರಂಜನ್, ಸಂಪತ್ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು' ನಮ್ಮ ಚಿತ್ರವನ್ನು ಮೆಚ್ಚಿ, ಈ ಪ್ರಶಸ್ತಿ ನೀಡಿದ ಕರ್ನಾಟಕ ಸರ್ಕಾರಕ್ಕೆ ನಮನಗಳು‘ ಎಂದು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.