ಚಿತ್ರ ಕೃಪೆ: @hombalefilms
ಕಾಂತಾರ ಅಧ್ಯಾಯ–1 ಯಶಸ್ಸಿನ ಬೆನ್ನಲ್ಲೇ ರಿಷಬ್ ಶೆಟ್ಟಿ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇದೀಗ ಬಿಹಾರದ ಪ್ರಾಚೀನ ಮಾ ಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಪೂಜೆ ಸಲ್ಲಿಸಿದ್ದಾರೆ. ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ.
ರಾಜ್ಯದ ಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ್ದರು. ಕೆಲ ದಿನಗಳ ಹಿಂದೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿರುವುದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.
ನಿರ್ದೇಶಿಸಿ, ನಟಿಸಿರುವ ಕಾಂತಾರ ಅಧ್ಯಾಯ–1 ಚಿತ್ರ ವಿಶ್ವದಾದಂತ್ಯ ಬಿಡುಗಡೆಯಾಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಸಿನಿಮಾದಲ್ಲಿ ಕನಕವತಿಯಾಗಿ ರುಕ್ಮಿಣಿ ವಸಂತ್, ಕುಲಶೇಖರನಾಗಿ ಗುಲ್ಶನ್ ದೇವಯ್ಯ,ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ನಟಿಸಿದ್ದಾರೆ.
ಈ ಚಿತ್ರವು ಬಿಡುಗಡೆಯಾಗಿ ಎರಡನೇ ವಾರದಲ್ಲಿ ₹700 ಕೋಟಿಗೂ ಅಧಿಕ ಗಳಿಕೆ ಮಾಡಿ ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.