ADVERTISEMENT

ಯಶ್​ಗೆ 34ನೇ ಜನ್ಮದಿನದ ಸಂಭ್ರಮ: ಬಿಡುಗಡೆಯಾಯ್ತು ಕೆಜಿಎಫ್‌2 ಚಿತ್ರದ ಪೋಸ್ಟರ್‌

​ಪ್ರಜಾವಾಣಿ ವಾರ್ತೆ
Published 8 ಜನವರಿ 2020, 6:18 IST
Last Updated 8 ಜನವರಿ 2020, 6:18 IST
   

ಬೆಂಗಳೂರು: ಕೆಜಿಎಫ್‌ ಸಿನಿಮಾ ಖ್ಯಾತಿಯ ನಟ 'ರಾಕಿಂಗ್​ ಸ್ಟಾರ್​' ಯಶ್​ ಅವರಿಗೆ ಇಂದು (ಜ.8) 34ನೇ ವರ್ಷದ ಜನ್ಮದಿನಸಂಭ್ರಮ. ಕೆಜಿಎಫ್‌ 2 ಚಿತ್ರತಂಡ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಹೊಸ ಪೋಸ್ಟರ್‌ ಬಿಡುಗಡೆ ಮಾಡಿದ್ದು ಯಶ್‌ ಅಭಿಮಾನಿಗಳು ಸಖತ್‌ ಖುಷಿಯಾಗಿದ್ದಾರೆ.

ಯಶ್‌ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅಭಿಮಾನಿಗಳು ಮತ್ತು ಚಿತ್ರರಂಗ ಗಣ್ಯರು ಶುಭಾಶಯಗಳನ್ನು ಹೇಳುತ್ತಿದ್ದಾರೆ. ಯಶ್‌ ಪತ್ನಿ ಹಾಗೂ ನಟಿ ರಾಧಿಕ ಪುತ್ರಿ ಐರಾ ಜೊತೆ ಸೇರಿ ವಿಶೇಷ ಕೇಕ್‌ ತಯಾರಿಸಿ ಜನ್ಮದಿನದ ಶುಭಾಶಯಕೋರಿದ್ದಾರೆ.

ನಿರ್ದೇಶಕ ಪ್ರಶಾಂತ್‌ ನೀಲ್‌ ಕೆಜಿಎಫ್‌ 2 ಚಿತ್ರದ ಹೊಸ ಪೋಸ್ಟರ್‌ ಅನ್ನು ಟ್ವೀಟ್‌ ಮಾಡುವ ಮೂಲಕ ಜನ್ಮದಿನದ ಶುಭಾಶಯ ಹೇಳಿದ್ದಾರೆ.

ADVERTISEMENT

ಕಳೆದ ವರ್ಷ ಅಂಬರೀಶ್​ ನಿಧನರಾದ ಹಿನ್ನೆಲೆಯಲ್ಲಿ ಜನ್ಮದಿನ ಆಚರಿಸಿಕೊಳ್ಳುವುದಿಲ್ಲ ಎಂದು ಯಶ್​ ಹೇಳಿದ್ದರು. ಈ ಬಾರಿ ಅಭಿಮಾನಿಗಳು ಯಶ್‌ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸುತ್ತಿದ್ದಾರೆ. ನಿನ್ನೆ ರಾತ್ರಿ ಯಶ್‌ ಮನೆಯ ಮುಂದೆ ಅಭಿಮಾನಿಗಳು ನೆರೆದಿದ್ದರು. ಆದರೆ ಅಭಿಮಾನಿಗಳನ್ನು ಭೇಟಿ ಮಾಡಲು ಯಶ್‌ ಅವರಿಗೆ ಸಾಧ್ಯವಾಗಲಿಲ್ಲ.

ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಯಶ್‌ ಅಭಿಮಾನಿಗಳು ಸಾರ್ವಜನಿಕರಿಗೆ ಸಿಹಿ ಸಂಭ್ರಮಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.