ಬೆಂಗಳೂರು: ಖ್ಯಾತ ನಿರ್ದೇಶಕ ಎಸ್‌ಎಸ್ ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಆರ್‌ಆರ್‌ಆರ್‘ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ರಾಜಮೌಳಿ ಶೈಲಿ ಸಿನಿಮಾದ ಅದ್ದೂರಿತನ ಮತ್ತೆ ರಾರಾಜಿಸಿದೆ.
ಬೆಳಿಗ್ಗೆ 10.30 ಕ್ಕೆ ಆಯ್ದ ಚಿತ್ರಮಂದಿರಗಳಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಯಾಯಿತು. ನಂತರ 11 ಗಂಟೆಗೆ ಯೂಟ್ಯೂಬ್‌ನಲ್ಲಿಟ್ರೈಲರ್ ಬಿಡುಗಡೆಯಾಗಿ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ತೀವ್ರ ಕುತೂಹಲ ಮೂಡುವಂತೆ ಮಾಡಿದೆ.ಆರ್‌ಆರ್‌ಆರ್ ಟ್ರಂಡಿಂಗ್ ಆಗಿದೆ.
ಬರೋಬ್ಬರಿ 3 ನಿಮಿಷ 10 ಸೆಕೆಂಡ್ ಇರುವ ಈ ಟ್ರೈಲರ್‌ನಲ್ಲಿ ಕಥೆ ಹೇಗಿರುತ್ತದೆ ಎನ್ನವುದನ್ನು ರಾಜಮೌಳಿ ಬಿಟ್ಟುಕೊಟ್ಟಿಲ್ಲ. ಹಾಗಾಗಿ ಸಿನಿಮಾದ ಚಿತ್ರಕಥೆ ಬಗ್ಗೆ ತೀವ್ರ ಕುತೂಹಲ ಮೂಡುವಂತೆ ಮಾಡಿದೆ.
2022 ರ ಜನವರಿ 7 ರಂದು ‘ಆರ್‌ಆರ್‌ಆರ್‘ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಸಂಕ್ರಾಂತಿ ಹಬ್ಬಕ್ಕೆ ಸಿನಿಪ್ರಿಯರಿಗೆ ದೊಡ್ಡ ಉಡುಗೊರೆ ಸಿಕ್ಕಂತಾಗಿದೆ.
ಡಿವಿವಿ ಎಂಟರ್‌ಟೈನ್‌ಮೆಂಟ್ಸ್ ಸಂಸ್ಥೆಯು ಸುಮಾರು ₹400 ಕೋಟಿಯಲ್ಲಿ ನಿರ್ಮಿಸುತ್ತಿರುವ ಈ ಚಿತ್ರವು 20ನೇ ಶತಮಾನದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಾದ ಅಲ್ಲೂರಿ ಸೀತಾರಾಮರಾಜು ಮತ್ತು ಕೋಮರಂ ಭೀಮ್ ಅವರ ಜೀವನ ಕಥೆಯನ್ನು ಆಧರಿಸಿದೆ.
ಈ ಚಿತ್ರದಲ್ಲಿ ರಾಮ್‌ಚರಣ್ ಅಲ್ಲೂರಿ ಸೀತಾರಾಮರಾಜು ಪಾತ್ರದಲ್ಲಿ, ಎನ್‌ಟಿಆರ್ ಜೂನಿಯರ್ ಕೋಮರಂ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ನಟರಾದ ಅಜಯ್ ದೇವ್‌ಗನ್ ಮತ್ತು ಆಲಿಯಾ ಭಟ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.