ADVERTISEMENT

Video: ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರದ ಟ್ರೇಲರ್ ಬಿಡುಗಡೆ ವೇಳೆ ದಾಂಧಲೆ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2021, 8:57 IST
Last Updated 30 ಮಾರ್ಚ್ 2021, 8:57 IST

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದ ಚಿತ್ರಮಂದಿರದಲ್ಲಿ ನಟ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಅವರ ‘ವಕೀಲ್ ಸಾಬ್’ ಚಿತ್ರದ ಟ್ರೇಲರ್ ಬಿಡುಗಡೆಯ ಸಂದರ್ಭದಲ್ಲಿ ದಾಂಧಲೆ ನಡೆಸಲಾಗಿದೆ. ಅಭಿಮಾನಿಗಳು ಕಾರ್ಯಕ್ರಮದ ಸಂಭ್ರಮಾಚರಣೆಗೆ ಮುಂದಾಗಿದ್ದರು. ಆದರೆ, ಸಂಗಮ್ ಚಿತ್ರಮಂದಿರದ ಸಿಬ್ಬಂದಿ ಅವಕಾಶ ನೀಡದ ಹಿನ್ನೆಲೆಯಲ್ಲಿ ದಾಂಧಲೆ ನಡೆಸಿದ್ದಾರೆ. ಗದ್ದಲದಲ್ಲಿ ಥಿಯೇಟರ್‌ನ ಗಾಜು ಪುಡಿಯಾಗಿವೆ. ಅಮಿತಾಬ್ ಬಚ್ಚನ್ ಅಭಿನಯದ ಬಾಲಿವುಡ್‌ನ ‘ಪಿಂಕ್’ ಚಿತ್ರದ ತೆಲುಗು ರಿಮೇಕ್ ಆಗಿರುವ ‘ವಕೀಲ್ ಸಾಬ್’ ಚಿತ್ರದ ಮೂಲಕ ಪವನ್ ಕಲ್ಯಾಣ್ ಎರಡು ವರ್ಷಗಳ ಬಳಿಕ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.