ADVERTISEMENT

ಖಡಕ್‌ ಲುಕ್‌ನಲ್ಲಿ ನಟಿ ರುಕ್ಮಿಣಿ ವಸಂತ್: ಕಾಂತಾರದ ಕನಕವತಿ ಈಗ ಮೆಲ್ಲಿಸಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜನವರಿ 2026, 5:25 IST
Last Updated 6 ಜನವರಿ 2026, 5:25 IST
<div class="paragraphs"><p>ನಟಿ ರುಕ್ಮಿಣಿ ವಸಂತ್, ನಟ ಯಶ್</p></div>

ನಟಿ ರುಕ್ಮಿಣಿ ವಸಂತ್, ನಟ ಯಶ್

   

ಚಿತ್ರ: ಎಕ್ಸ್‌ ಖಾತೆ

ರಾಕಿಂಗ್ ಸ್ಟಾರ್ ಯಶ್‌ ನಟನೆಯ 19ನೇ ಸಿನಿಮಾ ‘ಟಾಕ್ಸಿಕ್‌’ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಸಿನಿಮಾ ಬಿಡುಗಡೆಗೆ ಇನ್ನು 71 ದಿನಗಳು ಬಾಕಿ ಇದ್ದು, 2026ರ ಮಾರ್ಚ್‌ 19ರಂದು ತೆರೆಗೆ ಬರಲಿದೆ. ಸಿನಿಮಾದ ಕುರಿತು ಚಿತ್ರತಂಡ ಒಂದೊಂದೆ ಮಾಹಿತಿಗಳನ್ನು ನೀಡುತ್ತಿದೆ.

ADVERTISEMENT

ಇದೀಗ ನಟ ಯಶ್‌ ಅವರು ಸಾಮಾಜಿಕ ಮಾಧ್ಯಮದಲ್ಲಿ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್‌ ಒಂದನ್ನು ಹಂಚಿಕೊಂಡಿದ್ದಾರೆ. ಟಾಕ್ಸಿಕ್‌ ಸಿನಿಮಾದಲ್ಲಿ ನಟಿ ರುಕ್ಮಿಣಿ ವಸಂತ್ ಮೆಲ್ಲಿಸಾ ಎಂಬ ಪಾತ್ರದಲ್ಲಿ ನಟಿಸಲಿದ್ದಾರೆ. ವಯಸ್ಕರಿಗೆ ಇದೊಂದು ವಿಷಕಾರಿ ಕಾಲ್ಪನಿಕ ಕಥೆಯಾಗಿದೆ ಎಂದು ನಟ ಯಶ್‌ ಬರೆದುಕೊಂಡಿದ್ದಾರೆ. ನಟ ಹಂಚಿಕೊಂಡ ಪೋಸ್ಟರ್‌ನಲ್ಲಿ ನಟಿ ರುಕ್ಮಿಣಿ ವಸಂತ್ ಅವರು ಅತ್ಯಂತ ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ.

ಇದೇ ಪೋಸ್ಟರ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನು, ಗೀತು ಮೋಹನ್‌ದಾಸ್‌ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಟಾಕ್ಸಿಕ್‌ ಸಿನಿಮಾದಲ್ಲಿ ಸ್ಟಾರ್‌ ನಟಿಯರ ದೊಡ್ಡ ಸಮೂಹವೇ ಇದೆ. ಈಗಾಗಲೇ ನಟ ಯಶ್‌ ಅವರು ನಟಿ ಕಿಯಾರಾ ಅಡ್ವಾನಿ, ನಟಿ ಹುಮಾ ಖುರೇಷಿ, ನಯನತಾರಾ, ತಾರಾ ಸುತಾರಿಯಾ ಅವರನ್ನು ಪರಿಚಯಿಸಿದ್ದಾರೆ. ಇದೀಗ ಕನ್ನಡದ ನಟಿ ರುಕ್ಮಿಣಿ ವಸಂತ್ ಅವರನ್ನು ಹೊಸ ಶೈಲಿಯಲ್ಲಿ ಪರಿಚಯಿಸಲಾಗಿದೆ.

ಈ ಸಿನಿಮಾವು ಹಿಂದಿ, ತಮಿಳು, ತೆಲುಗು, ಮಲಯಾಳಂ ಸೇರಿದಂತೆ ಹಲವು ಭಾರತೀಯ ಹಾಗೂ ವಿದೇಶಿ ಭಾಷೆಗಳಲ್ಲಿ ಡಬ್‌ ಆಗಿ ರಿಲೀಸ್‌ ಆಗಲಿದೆ. ಹಾಲಿವುಡ್‌ನ ‘ಜಾನ್‌ ವಿಕ್‌’, ‘ಫಾಸ್ಟ್‌ ಆ್ಯಂಡ್‌ ಫ್ಯೂರಿಯಸ್‌’, ‘ವಾರಿಯರ್‌’ ಮುಂತಾದ ಸಿನಿಮಾಗಳಿಗೆ ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿದ್ದ ಜೆ.ಜೆ.ಪೆರ್‍ರಿ ‘ಟಾಕ್ಸಿಕ್‌’ನ ಸಾಹಸ ದೃಶ್ಯಗಳ ಸಂಯೋಜನೆ ಮಾಡಿದ್ದಾರೆ. ‘ಕೆ.ಜಿ.ಎಫ್‌’ ಖ್ಯಾತಿಯ ರವಿ ಬಸ್ರೂರು ಅವರೇ ಸಂಗೀತ ನಿರ್ದೇಶನ ಮಾಡಲಿದ್ದಾರೆ. ರಾಜೀವ್‌ ರವಿ ಛಾಯಾಚಿತ್ರಗ್ರಹಣ, ಉಜ್ವಲ್‌ ಕುಲಕರ್ಣಿ ಸಂಕಲನ, ಟಿಪಿ ಅಬಿದ್‌ ನಿರ್ಮಾಣ ವಿನ್ಯಾಸ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.