ADVERTISEMENT

ಜೂನ್‌ 28ಕ್ಕೆ ಶಿವರಾಜ್‌ ಕುಮಾರ್‌ ಅಭಿನಯದ ‘ರುಸ್ತುಂ’ ತೆರೆಗೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 11:46 IST
Last Updated 17 ಜೂನ್ 2019, 11:46 IST
   

ಸಾಹಸ ನಿರ್ದೇಶಕ ಕೆ. ರವಿವರ್ಮ ನಿರ್ದೇಶನದ ‘ಹ್ಯಾಟ್ರಿಕ್‌ ಹೀರೊ’ ಶಿವರಾಜ್‌ಕುಮಾರ್‌ ನಾಯಕ ನಟನಾಗಿರುವ ‘ರುಸ್ತುಂ’ ಚಿತ್ರ ಜೂನ್‌ 28ರಂದು ಬಿಡುಗಡೆಯಾಗಲಿದೆ.

ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಅವರು ಪೊಲೀಸ್ ಅಧಿಕಾರಿಯ ಪಾತ್ರ. ಇದು ಕಳ್ಳ– ಪೊಲೀಸ್‌ ಕಥೆ. ಬಾಲಿವುಡ್‌ ನಟ ವಿವೇಕ್‌ ಒಬೆರಾಯ್‌ ಕೂಡ ಚಿತ್ರದಲ್ಲಿ ನಟಿಸಿದ್ದಾರೆ. ‍ಸಿನಿಮಾಕ್ಕೊಂದು ಟರ್ನಿಂಗ್‌ ನೀಡುವ ವಿಶೇಷ ಪಾತ್ರ ಅವರದು ಎಂದು ಚಿತ್ರತಂಡ ಹೇಳಿಕೊಂಡಿದೆ.

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಈ ಚಿತ್ರದ ನಾಯಕಿ. ಮಯೂರಿ, ರಚಿತಾ ರಾಮ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಮಹೇಂದ್ರ ಸಿಂಹ ಅವರದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.