ಎಸ್.ನಾರಾಯಣ್ ನಿರ್ದೇಶನದ, ‘ದುನಿಯಾ’ ವಿಜಯ್ ನಟನೆಯ ‘ಮಾರುತ’ ಚಿತ್ರದ ಚಿತ್ರೀಕರಣ ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಇದೀಗ ಚಿತ್ರತಂಡ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಚಿತ್ರದ ಡಬ್ಬಿಂಗ್ ಕೂಡಾ ಮುಗಿಸಿದೆ.
ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಈ ಚಿತ್ರದ ಮುಖ್ಯಭೂಮಿಕೆಯಲ್ಲಿದ್ದು, ‘ಪ್ರೇಮಂ ಪೂಜ್ಯಂ’ ಸಿನಿಮಾ ಮೂಲಕ ನಾಯಕಿಯಾಗಿ ಚಂದನವನಕ್ಕೆ ಹೆಜ್ಜೆ ಇಟ್ಟ ನಟಿ ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸಿದ್ದಾರೆ. ‘ಮಾರುತ’ ಚಿತ್ರವನ್ನು ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ಮಂಜು ಹಾಗೂ ರಮೇಶ್ ಯಾದವ್ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ಧಾರವಾಡ, ಕೂಡಲ ಸಂಗಮ, ಸವದತ್ತಿ, ಬೆಳಗಾವಿ, ಗೋವಾ ಮುಂತಾದ ಕಡೆ ಚಿತ್ರದ ಚಿತ್ರೀಕರಣ ನಡೆದಿದ್ದು, ಪಿ.ಕೆ.ಎಚ್ ದಾಸ್ ಛಾಯಾಚಿತ್ರಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ.
ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ, ಚಿತ್ರಾ ಶೆಣೈ ಮುಂತಾದವರು ತಾರಾಬಳಗದಲ್ಲಿದ್ದಾರೆ ಚಿತ್ರದ ವಿಶೇಷ ಪಾತ್ರದಲ್ಲಿ ನಟ ರವಿಚಂದ್ರನ್ ನಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.