ADVERTISEMENT

Sandalwood: ‘ಮ್ಯಾಂಗೋ ಪಚ್ಚ’ ಚಿತ್ರದ ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ

​ಪ್ರಜಾವಾಣಿ ವಾರ್ತೆ
Published 14 ಜನವರಿ 2026, 23:30 IST
Last Updated 14 ಜನವರಿ 2026, 23:30 IST
ಸಂಚಿತ್‌ ಸಂಜೀವ್‌
ಸಂಚಿತ್‌ ಸಂಜೀವ್‌   

ಸುದೀಪ್ ಅಳಿಯ ಸಂಚಿತ್ ಸಂಜೀವ್ ನಾಯಕನಾಗಿ ನಟಿಸಿರುವ ‘ಮ್ಯಾಂಗೋ ಪಚ್ಚ’ ಚಿತ್ರದ ‘ಅರಗಿಣಿಯೇ’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಕ್ರೈಂ ಥ್ರಿಲ್ಲರ್ ಜಾನರ್‌ನಲ್ಲಿ ಸಿನಿಮಾವಿದ್ದು, ವಿವೇಕ್‌ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. 

ಈ ಹಾಡಿಗೆ ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಸಾನ್ವಿ ಸುದೀಪ್ ಮತ್ತು ಕಪಿಲ್ ಕಪಿಲನ್ ಧ್ವನಿಯಾಗಿದ್ದಾರೆ. ಧನಂಜಯ ರಂಜನ್ ಸಾಹಿತ್ಯವಿದೆ.

ಚಿತ್ರವನ್ನು ಕೆಆರ್‌ಜಿ ಮತ್ತು ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ. ಮೈಸೂರು ಭಾಗದ ಕಥೆಯಾಗಿದ್ದು, ಸಂಚಿತ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಜಲ್ ಕುಂದರ್, ಮಯೂರ್ ಪಟೇಲ್, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಶೇಖರ್‌ ಚಂದ್ರ ಛಾಯಾಚಿತ್ರಗ್ರಹಣವಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.