ADVERTISEMENT

ಕಾಶ್ಮೀರಿ ಪಂಡಿತರ ಕುರಿತ ಹೇಳಿಕೆ: ನಟಿ ಸಾಯಿ ಪಲ್ಲವಿ ವಿರುದ್ಧ ಬಜರಂಗದಳ ದೂರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2022, 2:45 IST
Last Updated 17 ಜೂನ್ 2022, 2:45 IST
   

ಹೈದರಾಬಾದ್‌: ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಯನ್ನು ಹೋಲಿಸಿ ಹೇಳಿಕೆ ನೀಡಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ.

ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಬಜರಂಗದಳದ ಮುಖಂಡರು ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಂದರ್ಶನದ ವಿಡಿಯೊ ನೋಡಿದ ಬಳಿಕ ಕಾನೂನು ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ADVERTISEMENT

'ವಿರಾಟ ಪರ್ವಂ' ಚಿತ್ರದ ಪ್ರಚಾರದ ಪ್ರಯುಕ್ತ ಮಾಧ್ಯಮ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದ ಸಾಯಿ ಪಲ್ಲವಿ, ‘ಕಾಶ್ಮೀರಿ ಪಂಡಿತರ ಹತ್ಯೆ, ಗೋವು ಸಾಗಿಸುವ ಮುಸ್ಲಿಮರ ಮೇಲಿನ ದಾಳಿಗಳು ಒಂದೇ ತೆರನಾದ ಕ್ರೌರ್ಯವನ್ನು ಹೊಂದಿವೆ. ಈ ರೀತಿ ಮಾಡುವುದು ಮನುಷ್ಯತ್ವವಲ್ಲ, ನಾವು ಒಳ್ಳೆಯ ಮನುಷ್ಯರಾಗಬೇಕು’ ಎಂದು ಹೇಳಿದ್ದರು.

ಈ ಹೇಳಿಕೆಯಿಂದ ವಿವಾದ ಸೃಷ್ಟಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪರ–ವಿರೋಧದ ಚರ್ಚೆಗಳು ನಡೆಯುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.