ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಶಂಕಿತ ಆರೋಪಿಯ ಮೊದಲ ಸಿಸಿಟಿವಿ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಬೆನ್ನಿಗೆ ಬ್ಯಾಗ್ ಹಾಕಿಕೊಂಡಿರುವ ಶಂಕಿತನು ಮೆಟ್ಟಿಲು ಇಳಿದುಕೊಂಡು ಪರಾರಿಯಾಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬುಧವಾರ ತಡರಾತ್ರಿ 2.30ರ ಹೊತ್ತಿಗೆ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸದಲ್ಲಿ ಅವರ ಮೇಲೆ ಹಲ್ಲೆ ನಡೆದಿತ್ತು. ತೀವ್ರವಾಗಿ ಗಾಯಗೊಂಡ ಸೈಫ್ ಅವರನ್ನು ನಗರದ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ದರೋಡೆ ಯತ್ನದಲ್ಲಿ ದಾಳಿ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಬಿಡುಗಡೆ ಮಾಡಿರುವ ಶಂಕಿತ ಆರೋಪಿಯ ಮೊದಲ ಫೋಟೊ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.