ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ನಗರದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಇಂದು (ಭಾನುವಾರ) ಮುಂಜಾನೆ ಬಂಧಿಸಿದ್ದಾರೆ.
ವಿಜಯ್ ದಾಸ್ ಬಂಧಿತ ಆರೋಪಿ. ಅಪರಾಧ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.
ಈತ ರೆಸ್ಟೋರೆಂಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಸಿಕ್ಕಿಬೀಳುವ ಭಯದಲ್ಲಿ ಬಿಜೋಯ್ ದಾಸ್, ಮೊಹಮ್ಮದ್ ಇಲಿಯಾಸ್ ಸೇರಿದಂತೆ ಬೇರೆ ಹೆಸರಿನಲ್ಲಿ ಗುರುತಿಸಿಕೊಂಡಿದ್ದ. ಸದ್ಯ ಆರೋಪಿಯನ್ನು ಖಾರ್ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.