

ಸಲೀಂ ಖಾನ್ ಮತ್ತು ಸಲ್ಮಾನ್ ಖಾನ್
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ತಂದೆ, ಹಿರಿಯ ಚಿತ್ರಕಥೆಗಾರ ಸಲೀಂ ಖಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಸಲೀಂ ಖಾನ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಸಲ್ಮಾನ್ ಖಾನ್, ಸಹೋದರಿಯರಾದ ಅಲ್ವಿರಾ ಅಗ್ನಿಹೋತ್ರಿ ಮತ್ತು ಅರ್ಪಿತಾ ಖಾನ್ ಶರ್ಮಾ, ನಟ ಆಯುಷ್ ಶರ್ಮಾ ಸೇರಿದಂತೆ ಕುಟುಂಬಸ್ಥರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಸಲೀಂ ಖಾನ್ ಅದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ. 2025ರ ನವೆಂಬರ್‌ನಲ್ಲಿ ಸಲೀಂ ಖಾನ್ ಅವರು 90ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಭಾರತೀಯ ಸಿನಿಮಾ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.