
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಇಂದು (ಡಿ.27) 60ನೇ ಜನ್ಮದಿನದ ಸಂಭ್ರಮ. ಹುಟ್ಟುಹಬ್ಬದ ಪ್ರಯುಕ್ತ ಇವರ ನಟನೆಯ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರದ ಟೀಸರ್ ಅನ್ನು ಇಂದು ಬಿಡುಗಡೆ ಮಾಡಲಾಗಿದೆ.
ಈ ಚಿತ್ರವು 2026ರ ಏಪ್ರಿಲ್17ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
‘ಶೂಟೌಟ್ ಅಟ್ ಲೋಖಂಡ್ವಾಲಾ’ ಸಿನಿಮಾದ ನಿರ್ದೇಶಕ ಅಪೂರ್ವ ಲಖಿಯಾ ಅವರ ನಿರ್ದೇಶನದ ‘ಬ್ಯಾಟಲ್ ಆಫ್ ಗಲ್ವಾನ್’ ಚಿತ್ರವು 2020ರಲ್ಲಿ ಭಾರತ ಮತ್ತು ಚೀನಾದ ನಡುವೆ ನಡೆದ ಗಾಲ್ವಾನ್ ಕಣಿವೆಯ ಸಂಘರ್ಷವನ್ನು ಆಧರಿಸಿದೆ.
‘ಬ್ಯಾಟಲ್ ಆಫ್ ಗಲ್ವಾನ್’ ಸಿನಿಮಾದಲ್ಲಿ ನಟ ಸಲ್ಮಾನ್ ಖಾನ್ ಅವರು ಸೇನಾಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವು ಸಲ್ಮಾನ್ ಖಾನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.