
ಸಲ್ಮಾನ್ ಖಾನ್
ತಮ್ಮ ವ್ಯಕ್ತಿತ್ವದ ಹಕ್ಕುಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಈ ಪ್ರಕರಣದ ವಿಚಾರಣೆ ಇಂದು (ಗುರುವಾರ) ನ್ಯಾಯಮೂರ್ತಿ ಮನ್‌ಮೀತ್ ಪ್ರೀತಮ್ ಸಿಂಗ್ ಅರೋರಾ ಅವರ ಪೀಠದ ಮುಂದೆ ಬರಲಿದೆ.
ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಅನಧಿಕೃತ ಬಳಕೆ ನಿರ್ಬಂಧಿಸಬೇಕು ಎಂದು ‘ಜಾನ್ ಡೊ’ ಸೇರಿ ಹಲವು ಮಂದಿ ವಿರುದ್ಧ ಸಲ್ಮಾನ್ ಖಾನ್ ಕೋರ್ಟ್ ಮೆಟ್ಟಿಲೇರಿದ್ದರು.
ವಾಣಿಜ್ಯ ಲಾಭಕ್ಕಾಗಿ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಈ ಹಿಂದೆ ಅಮಿತಾಬ್ ಬಚ್ಚನ್, ಐಶ್ವರ್ಯ ರೈ ಬಚ್ಚನ್, ಅಭಿಷೇಕ್ ಬಚ್ಚನ್, ನಾಗಾರ್ಜುನ, ಅನಿಲ್ ಕಪೂರ್, ಜಾಕಿ ಶ್ರಾಫ್, ಕರಣ್ ಜೋಹರ್, ಶ್ರೀ ಶ್ರೀ ರವಿಶಂಕರ್, ಜಗ್ಗಿ ವಾಸುದೇವ ಸೇರಿ ಹಲವು ಮಂದಿ ಕೋರ್ಟ್ ಮೆಟ್ಟಿಲೇರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.