ADVERTISEMENT

ಹಕ್ಕುಗಳ ರಕ್ಷಣೆ ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ನಟ ಸಲ್ಮಾನ್ ಖಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಡಿಸೆಂಬರ್ 2025, 14:14 IST
Last Updated 10 ಡಿಸೆಂಬರ್ 2025, 14:14 IST
<div class="paragraphs"><p>ಸಲ್ಮಾನ್ ಖಾನ್</p></div>

ಸಲ್ಮಾನ್ ಖಾನ್

   

ನವದೆಹಲಿ: ತಮ್ಮ ಪ್ರಚಾರ, ವ್ಯಕ್ತಿತ್ವದ ಹಕ್ಕುಗಳನ್ನು ರಕ್ಷಿಸುವಂತೆ ಕೋರಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕೆಲವು ವ್ಯಕ್ತಿಗಳು ಸೇರಿದಂತೆ ಸಂಸ್ಥೆಗಳು ತಮ್ಮ ಹೆಸರು, ಚಿತ್ರಗಳು ಮತ್ತು ಅನಧಿಕೃತವಾಗಿ ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಸಿದ ಕಂಟೆಂಟ್‌ಗಳನ್ನು ಬಳಸದಂತೆ ನಿರ್ದೇಶನ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ADVERTISEMENT

ನಾಳೆ (ಗುರುವಾರ) ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅವರು ಈ ಪ್ರಕರಣದ ವಿಚಾರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ದಿನಗಳಲ್ಲಿ ತಮ್ಮ ಪ್ರಚಾರ, ಚಿತ್ರಗಳನ್ನು ಲಾಭಕ್ಕಾಗಿ ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯುವಂತೆ ಕೋರಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ ಬಚ್ಚನ್, ಅಭಿಷೇಕ್ ಬಚ್ಚನ್, ನಾಗಾರ್ಜುನ, ಅನಿಲ್ ಕಪೂರ್, ಜಾಕಿ ಶ್ರಾಫ್, ಕರಣ್ ಜೋಹರ್, ಶ್ರೀ ಶ್ರೀ ರವಿಶಂಕರ್, ಸದ್ಗುರು ಜಗ್ಗಿ ವಾಸುದೇವ್ ಸೇರಿದಂತೆ ಅನೇಕರು ಕೋರ್ಟ್‌ ಮೆಟ್ಟಿಲೇರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.