ADVERTISEMENT

ನಮ್ಮ ಸಿನಿಮಾ ಯಾಕೆ ದಕ್ಷಿಣದಲ್ಲಿ ಓಡುವುದಿಲ್ಲ: ಸಲ್ಮಾನ್ ಖಾನ್ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಮಾರ್ಚ್ 2022, 11:23 IST
Last Updated 30 ಮಾರ್ಚ್ 2022, 11:23 IST
ನಟ ಸಲ್ಮಾನ್ ಖಾನ್
ನಟ ಸಲ್ಮಾನ್ ಖಾನ್   

ಬೆಂಗಳೂರು: ರಾಜಮೌಳಿ ನಿರ್ದೇಶನದ ಚಿತ್ರ ‘ಆರ್‌ಆರ್‌ಆರ್‌‘ ದೇಶದಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಬಾಲಿವುಡ್‌ ಮಂದಿಯಿಂದ ಪ್ರಶಂಸೆ ಗಳಿಸುತ್ತಿದೆ.

ನಟ ಸಲ್ಮಾನ್ ಖಾನ್ ಅವರು ಕೂಡ ಆರ್‌ಆರ್‌ಆರ್‌ ಚಿತ್ರವನ್ನು ಮೆಚ್ಚಿಕೊಂಡಿದ್ದು, ರಾಮ್ ಚರಣ್ ಅವರು ಪಾತ್ರವನ್ನು ನಿರ್ವಹಿಸಿರುವ ರೀತಿ ಅದ್ಭುತ ಎಂದಿದ್ದಾರೆ.

ಐಐಎಫ್‌ಎ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಲ್ಲೂ ಬಾಯ್, ರಾಮ್ ಚರಣ್ ಮತ್ತು ಜ್ಯೂ. ಎನ್‌ಟಿಆರ್ ಅವರ ಸಿನಿಮಾ ಆರ್‌ಆರ್‌ಆರ್‌, ಬಾಲಿವುಡ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಆದರೆ ನಮ್ಮ ಸಿನಿಮಾಗಳೇಕೆ ದಕ್ಷಿಣ ಭಾರತದಲ್ಲಿ ಯಶ ಕಾಣುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ದಬಾಂಗ್ ಸರಣಿಯನ್ನು ತೆಲುಗಿನಲ್ಲಿ ಪವನ್ ಕಲ್ಯಾಣ್ ಮಾಡಿದಾಗಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ವಾಂಟೆಡ್ ಕೂಡ ದಕ್ಷಿಣದಲ್ಲಿ ಉತ್ತಮ ಗಳಿಕೆ ಕಂಡಿತು. ಆದರೆ ಬಾಲಿವುಡ್‌ನಲ್ಲಿ ನಮ್ಮ ಪ್ರಯತ್ನ ಸಾಲುತ್ತಿಲ್ಲ ಎಂದೆನಿಸುತ್ತಿದೆ ಎಂದು ಸಲ್ಮಾನ್ ಹೇಳಿರುವುದನ್ನು ಬಾಲಿವುಡ್‌ಲೈಫ್.ಕಾಂ ವರದಿ ಮಾಡಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.