ಸಲ್ಮಾನ್ ಖಾನ್
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ಸಿಕಂದರ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಕಾಜಲ್ ಅಗರ್ವಾಲ್ ನಟಿಸಿದ್ದಾರೆ.
ಈ ಕುರಿತು ಸಲ್ಮಾನ್ ಖಾನ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
21 ಸೆಕೆಂಡ್‌ಗಳ ಟೀಸರ್ ವಿಡಿಯೊದಲ್ಲಿ ಸಲ್ಮಾನ್ ಖಾನ್ ಅವರ ಪಾತ್ರದ ಕುರಿತು ಸಣ್ಣ ಪರಿಚಯವಿದೆ. ಆ್ಯಕ್ಷನ್ ರೀತಿಯಲ್ಲಿ ಟೀಸರ್ ಬಿಡುಗಡೆ ಮಾಡಲಾಗಿದ್ದು, ಸಂಜಯ್ ಎನ್ನುವ ಪಾತ್ರದಲ್ಲಿ ಖಾನ್ ಕಾಣಿಸಿಕೊಂಡಿದ್ದಾರೆ.
ಚಿತ್ರವು ಎ.ಆರ್. ಮುರುಗದಾಸ್ ನಿರ್ದೇಶನ, ಸಾಜಿದ್ ನಾದಿಯಾದ್‌ವಾಲಾ ನಿರ್ಮಾಣದಲ್ಲಿ ಮೂಡಿಬಂದಿದೆ.
ಈ ವರ್ಷದ ಈದ್ ವೇಳೆಗೆ ಚಿತ್ರ ಬಿಡುಗಡೆಯಾಗಲಿದೆ ಎಂದು ಈ ಹಿಂದೆ ಸಲ್ಮಾನ್ ಖಾನ್ ಅವರೇ ಹೇಳಿದ್ದರು. ಸಿನಿಮಾ ಬಿಡುಗಡೆಯ ಅಧಿಕೃತ ದಿನಾಂಕ ಇನ್ನಷ್ಟೇ ಘೋಷಣೆಯಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.