ADVERTISEMENT

ಬೆರಗುಗೊಳಿಸುವ ಲಕ್ಷದ್ವೀಪದಲ್ಲಿ ಮೋದಿಯನ್ನು ನೋಡಲು ತುಂಬಾ ಖುಷಿಯಾಗಿದೆ: ಸಲ್ಮಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2024, 11:12 IST
Last Updated 7 ಜನವರಿ 2024, 11:12 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ ಮತ್ತು&nbsp;ಬಾಲಿವುಡ್ ನಟ ಸಲ್ಮಾನ್‌ ಖಾನ್</p></div>

ಪ್ರಧಾನಿ ನರೇಂದ್ರ ಮೋದಿ ಮತ್ತು ಬಾಲಿವುಡ್ ನಟ ಸಲ್ಮಾನ್‌ ಖಾನ್

   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿರುವುದಕ್ಕೆ ಬಾಲಿವುಡ್ ನಟ ಸಲ್ಮಾನ್‌ ಖಾನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಲಕ್ಷದ್ವೀಪದ ಸುಂದರವಾದ ಮತ್ತು ಬೆರಗುಗೊಳಿಸುವ ಕಡಲತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡುವುದಕ್ಕೆ ಸಂತಸವಾಗುತ್ತದೆ. ಈ ಸುಂದರವಾದ ಸ್ಥಳ ನಮ್ಮ ಭಾರತದಲ್ಲಿದೆ ಎಂಬುದು ಹೆಮ್ಮೆಯ ಸಂಗತಿ’ ಎಂದು ಬರೆದುಕೊಂಡಿದ್ದಾರೆ.

ADVERTISEMENT

ಇತ್ತೀಚೆಗೆ ಪ್ರಧಾನಿ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಮಾಲ್ಡೀವ್ಸ್‌ಗೆ ಪರ್ಯಾಯವಾಗಿ ಲಕ್ಷದ್ವೀಪವನ್ನು ಪ್ರವಾಸಿ ತಾಣವಾಗಿ ಮಾಡುವಂತೆ ನೆಟ್ಟಿಗರು ಕಾಮೆಂಟ್‌ ಮಾಡಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಜಾನ್ ಅಬ್ರಹಾಂ ಮತ್ತು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಲಕ್ಷದ್ವೀಪಕ್ಕೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮಾಲ್ಡೀವ್ಸ್ ಅನ್ನು ಭಾರತ ಗುರಿಯಾಗಿಸಿಕೊಂಡಿದೆ: ಮಾಲ್ಡೀವ್ಸ್ ಸಚಿವರ ಆರೋಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಕೆಲವು ದಿನಗಳ ಬಳಿಕ ಮಾಲ್ಡೀವ್ಸ್ ಸಚಿವರೊಬ್ಬರು ಭಾರತವು ಮಾಲ್ಡೀವ್ಸ್ ದೇಶವನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತವು ಮಾಲ್ಡೀವ್ಸ್ ಅನ್ನು ಗುರಿಯಾಗಿಸಿಕೊಂಡಿದ್ದು, ಬೀಚ್‌ ಪ್ರವಾಸೋದ್ಯಮ ವಿಚಾರದಲ್ಲಿ ಭಾರತ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.