ADVERTISEMENT

ಜೀವ ಬೆದರಿಕೆ | ನಟ ಸಲ್ಮಾನ್‌ ಖಾನ್‌ ನಿವಾಸಕ್ಕೆ ಬುಲೆಟ್ ಪ್ರೂಫ್ ಗ್ಲಾಸ್!

​ಪ್ರಜಾವಾಣಿ ವಾರ್ತೆ
Published 7 ಜನವರಿ 2025, 11:39 IST
Last Updated 7 ಜನವರಿ 2025, 11:39 IST
ನಟ ಸಲ್ಮಾನ್‌ ಖಾನ್‌
ನಟ ಸಲ್ಮಾನ್‌ ಖಾನ್‌   

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಹೆಚ್ಚಿರುವ ಕಾರಣದಿಂದಾಗಿ ನಟನ ನಿವಾಸಕ್ಕೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಒದಗಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸಲ್ಮಾನ್‌ ನಿವಾಸದ ಬಾಲ್ಕನಿಗೆ ಬುಲೆಟ್ ಪ್ರೂಫ್ ಗ್ಲಾಸ್, ಹೈಟೆಕ್ ಸಿಸಿಟಿವಿ ಕ್ಯಾಮೆರಾ ಸೇರಿದಂತೆ ಅತ್ಯಾಧುನಿಕ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹುಟ್ಟುಹಬ್ಬ ಸೇರಿದಂತೆ ವಿಶೇಷ ದಿನಗಳಲ್ಲಿ ಸಲ್ಮಾನ್‌ ಖಾನ್‌ ಬಾಲ್ಕನಿಯಿಂದ ಅಭಿಮಾನಿಗಳತ್ತ ಕೈ ಬೀಸುತ್ತಾರೆ. ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಇದು ಅಗತ್ಯವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಸಲ್ಮಾನ್‌ ಖಾನ್‌ ಅವರಿಗೆ 24 ಗಂಟೆಗಳ ಕಾಲ ಪೊಲೀಸರು ರಕ್ಷಣೆ ಒದಗಿಸುತ್ತಿದ್ದಾರೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

2024ರ ಏಪ್ರಿಲ್‌ನಲ್ಲಿ ಎರಡು ಬೈಕ್‌ಗಳಲ್ಲಿ ಬಂದಿದ್ದ ಇಬ್ಬರು ಆರೋಪಿಗಳು ಮುಂಜಾನೆ 5 ಗಂಟೆ ವೇಳೆಗೆ ಮುಂಬೈನ ಬಾಂದ್ರಾ ಪ್ರದೇಶದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ ಎದುರು ನಾಲ್ಕು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನಿಂದ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರಿಗೆ ಸತತವಾಗಿ ಜೀವ ಬೆದರಿಕೆ ಸಂದೇಶಗಳು ಬರುತ್ತಿದ್ದ ಹಿನ್ನೆಲೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗಷ್ಟೇ ಸಲ್ಮಾನ್‌ ಅಭಿನಯದ ‘ಸಿಕಂದರ್’ ಚಿತ್ರದ ಟೀಸರ್‌ ಬಿಡುಗಡೆಯಾಗಿದ್ದು, ಈ ವರ್ಷದ ಈದ್‌ ಹಬ್ಬಕ್ಕೆ ತೆರೆ ಮೇಲೆ ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.