ಬೆಂಗಳೂರು: ಬಹುಭಾಷಾ ನಟಿ ಸಮೀರಾ ರೆಡ್ಡಿ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ. ಸದ್ಯ ಅವರು ಮನೆಯಲ್ಲೇ ಪ್ರತ್ಯೇಕವಾಸದಲ್ಲಿ ಇದ್ದಾರೆ.
ತಮಗೆ ಸೋಂಕು ತಗುಲಿರುವ ಬಗ್ಗೆ ಸಮೀರಾ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಶೀಘ್ರ ಗುಣಮುಖರಾಗುವ ವಿಶ್ವಾಸ ಹೊಂದಿದ್ದಾರೆ. ಕಳೆದ ವರ್ಷವಷ್ಟೇ ಸಮೀರಾ ಅವರು ತಮ್ಮ ಕುಟುಂಬ ಸಮೇತ ಗೋವಾದಲ್ಲಿ ನೆಲೆಯಾಗಿದ್ದರು.
ಸಮೀರಾ ಸದ್ಯ ಚಿತ್ರರಂಗದಿಂದ ದೂರವಿದ್ದಾರೆ. ಫಿಟ್‍ನೆಸ್ ಫೋಟೋ ಹಾಗೂ ವೀಡಿಯೋಗಳನ್ನು ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.