ಉಡುಪಿ ಕೃಷ್ಣ ಮಠದ ಶೀರೂರು ಪರ್ಯಾಯ ಮಹೋತ್ಸವದಲ್ಲಿ ‘ಮ್ಯಾಂಗೋ ಪಚ್ಚ’ ಚಿತ್ರದ ನಾಯಕ ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್, ನಾಯಕಿ ಕಾಜಲ್ ಕುಂದರ್ ಭಾಗಿಯಾಗಿದ್ದರು.
ಉತ್ಸವದಲ್ಲಿ ಭಾಗಿಯಾಗಿದ್ದ ಪೃಥ್ವಿ ಅಂಬಾರ್, ಸಂಚಿತ್ ಸಂಜೀವ್, ಕಾಜಲ್ ಕುಂದರ್ ಅವರಿಗೆ ಸ್ಪೀಕರ್ ಯು ಟಿ ಖಾದರ್ ಅಭಿನಂದಿಸಿದರು. ಇದೇ ಉತ್ಸವದಲ್ಲಿ ‘ಮ್ಯಾಂಗೋ ಪಚ್ಚ’ ಚಿತ್ರದ ವಿಡಿಯೊವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಸಂಚಿತ್ ಸಂಜೀವ್ ಹಾಗೂ ಕಾಜಲ್ ಕುಂದರ್ ನಟನೆಯ ‘ಮ್ಯಾಂಗೋ ಪಚ್ಚ’ ಚಿತ್ರದ ಚಿತ್ರೀಕರಣವು ಬರದಿಂದ ಸಾಗುತ್ತಿದೆ. ಇನ್ನೂ ಈ ಚಿತ್ರದ ‘ಹಸ್ರವ್ವ’, ‘ಅರಗಿಣಿಯೇ’ ಹಾಡು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ. ಈ ಚಿತ್ರದ ಹಾಡಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿಯ ಧ್ವನಿಗೂಡಿಸಿದ್ದಾರೆ .
ಚಿತ್ರವನ್ನು ಕೆಆರ್‌ಜಿ ಮತ್ತು ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡಿದೆ.
ಸಂಚಿತ್ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕಾಜಲ್ ಕುಂದರ್, ಮಯೂರ್ ಪಟೇಲ್, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.