ADVERTISEMENT

ಚಂದನವನ: 27ಕ್ಕೆ ‘ಮೋಕ್ಷ’ ಟ್ರೇಲರ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 7:42 IST
Last Updated 14 ಮಾರ್ಚ್ 2021, 7:42 IST
ಮೋಕ್ಷ ಚಿತ್ರದ ದೃಶ್ಯ
ಮೋಕ್ಷ ಚಿತ್ರದ ದೃಶ್ಯ   

ಸಸ್ಪೆನ್ಸ್‌ ಥ್ರಿಲ್ಲರ್‌ ಚಿತ್ರ ‘ಮೋಕ್ಷ’ದ ಟ್ರೇಲರ್‌ ಮಾರ್ಚ್‌ 27ರಂದು ಬಿಡುಗಡೆ ಆಗಲಿದೆ. ಸಮರ್ಥ್‌ ನಾಯಕ್‌ ಈ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರು.

ಚಿತ್ರದಲ್ಲಿ ವಿಶೇಷವಾಗಿ ಮಾಸ್ಕ್ ಮ್ಯಾನ್ ಎಂಬ ಪಾತ್ರ ಎಲ್ಲರ ಗಮನ ಸೆಳೆಯಲಿದೆ ಎಂದು ಚಿತ್ರತಂಡ ಹೇಳಿದೆ. ಜಯಂತ್ ಕಾಯ್ಕಿಣಿ, ಕುಮಾರ್ ದತ್ ಅವರು ಬರೆದಿರುವ ಎರಡು ಹಾಡುಗಳಿಗೆ ಕಿಶನ್ ಮೋಹನ್ ಹಾಗೂ ಸಚಿನ್ ಬಾಲು ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಕಿಶನ್ ಮೋಹನ್ ಅವರದು.

ಗುರುಪ್ರಶಾಂತ್ ರೈ, ಜೋಮ್ ಜೋಸಫ್, ಕಿರಣ್ ಹಂಪಾಪುರ ಛಾಯಾಗ್ರಹಣ ಹಾಗೂ ವರುಣ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ.

ADVERTISEMENT

ಮೋಹನ್ ಧನರಾಜ್ ಮತ್ತು ಆರಾಧ್ಯ ಲಕ್ಷ್ಮಣ್ ಈ ಚಿತ್ರದ ಪ್ರಮುಖ ಪಾತ್ರದಲ್ಲಿದ್ದಾರೆ. ತಾರಕ್ ಪೊನ್ನಪ್ಪ, ಭೂಮಿ ಅಜ್ಞಾನಿ, ಪ್ರಶಾಂತ್ ನಟನ ತಾರಾಬಳಗದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.