ADVERTISEMENT

ನಾನು ಕೋಪ ಮಾಡ್ಕೊಳಲ್ಲ: ದುಬೈನಿಂದ ನಟ ದರ್ಶನ್‌ ಹೀಗೆ ಹೇಳಿದ್ದೇಕೆ?

​ಪ್ರಜಾವಾಣಿ ವಾರ್ತೆ
Published 9 ಜನವರಿ 2024, 12:16 IST
Last Updated 9 ಜನವರಿ 2024, 12:16 IST
ದರ್ಶನ್‌ 
ದರ್ಶನ್‌    

ದುಬೈನಲ್ಲಿ ‘ಕಾಟೇರ’ ಸಿನಿಮಾದ ಪ್ರದರ್ಶನಗಳಲ್ಲಿ ಪಾಲ್ಗೊಂಡು ಸಿನಿಮಾದ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ನಟ ದರ್ಶನ್‌, ಮಂಗಳವಾರ(ಜ.9) ಸಂಜೆ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಮಾಡಿರುವ ಪೋಸ್ಟ್‌ ಒಂದು ಸದ್ಯ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ.  

ಇತ್ತೀಚೆಗೆ ಬೆಂಗಳೂರಿನ ಪಬ್‌ ಒಂದರಲ್ಲಿ ನಿಯಮ ಉಲ್ಲಂಘಿಸಿ ಮುಂಜಾನೆಯವರೆಗೆ ಪಾರ್ಟಿ ಆಯೋಜಿಸಿದ ಕಾರಣಕ್ಕೆ ದರ್ಶನ್‌ ಸೇರಿದಂತೆ ಚಿತ್ರರಂಗದ ಎಂಟು ಮಂದಿಗೆ ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದರು. ಇದರ ಬೆನ್ನಲ್ಲೇ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

‘ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು. ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ. ಕಾಲಾಯ ತಸ್ಮಯ್ ನಮಃ’ ಎಂದು ಪೋಸ್ಟ್‌ನಲ್ಲಿ ದರ್ಶನ್‌ ಉಲ್ಲೇಖಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.