ADVERTISEMENT

ಖ್ಯಾತ ನಟ ಧ್ರುವ ಸರ್ಜಾ, ಪತ್ನಿ ಪ್ರೇರಣಾರಿಗೂ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 9:59 IST
Last Updated 15 ಜುಲೈ 2020, 9:59 IST
ಧ್ರುವ ಸರ್ಜಾ ಮತ್ತು ಪ್ರೇರಣಾ
ಧ್ರುವ ಸರ್ಜಾ ಮತ್ತು ಪ್ರೇರಣಾ   

ಬೆಂಗಳೂರು: ದಿನದಿಂದ ದಿನಕ್ಕೆ ಕೋವಿಡ್-19 ಸೋಂಕು ಪ್ರಕರಣಗಳು ಜಾಸ್ತಿಯಾಗುತ್ತಲೇ ಇದ್ದು, ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಿಗೂಸೋಂಕು ತಗುಲಿರುವುದು ದೃಢಪಟ್ಟಿದೆ.

ಧ್ರುವ ಸರ್ಜಾ ಅವರೇ ಸ್ವತಃ ಈ ವಿಚಾರವನ್ನು ತಿಳಿಸಿದ್ದು, ನಾನು ಮತ್ತು ನನ್ನ ಹೆಂಡತಿ ಇಬ್ಬರಿಗೂ ಕೆಲ ರೋಗ ಲಕ್ಷಣಗಳೊಂದಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ. ಆದ್ದರಿಂದ ನಮ್ಮನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಗುಣಮುಖರಾಗಿ ಹಿಂತಿರುಗುತ್ತೇವೆ ಎಂದು ನನಗೆ ನಂಬಿಕೆಯಿದೆ. ನಮ್ಮೊಂದಿಗೆ ಸಂಪರ್ಕ ಹೊಂದಿದವರೆಲ್ಲರೂ ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಂಡು ಸುರಕ್ಷಿತವಾಗಿರಿ. ಜೈ ಆಂಜನೇಯ ಎಂದು ಟ್ವೀಟ್ ಮಾಡಿದ್ದಾರೆ.

ಮೊನ್ನೆಯಷ್ಟೇ ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯಾ ಅವರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.