ಜನಾರ್ದನ್ ಚಿಕ್ಕಣ್ಣ ನಿರ್ದೇಶಿಸಿರುವ ದಿಗಂತ್ ಮುಖ್ಯಭೂಮಿಕೆಯಲ್ಲಿ ನಟಿಸಿರುವ ‘ಪೌಡರ್’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದು, ಸಿನಿಮಾ ಆಗಸ್ಟ್ 15ರಂದು ತೆರೆಕಾಣುತ್ತಿದೆ. ಚಿತ್ರದ ಎರಡನೇ ಹಾಡು ‘ಪರಪಂಚ ಘಮ ಘಮ’ ಬಿಡುಗಡೆಯಾಗಿದೆ.
‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಹಾಡುಗಳನ್ನು ಹಾಡಿರುವ ಆಂಟೋನಿ ದಾಸನ್ ಈ ಹಾಡಿಗೆ ಧ್ವನಿಯಾಗಿರುವುದು ವಿಶೇಷ. ಮಾಸ್ ಗೀತೆಗಳಿಗೆ ಹೆಸರುವಾಸಿಯಾದ ಆಂಟೋನಿ ಮೊದಲ ಬಾರಿಗೆ ಭಿನ್ನವಾದ ಹಾಡಿಗೆ ದನಿಯಾಗಿದ್ದಾರೆ. ‘ಪೌಡರ್’ ಒಂದು ಹಾಸ್ಯಭರಿತ ಚಿತ್ರವಾಗಿದ್ದು, ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್’ ಪ್ರಭಾವದಿಂದಾಗಿ ದಿಢೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳೇ ಚಿತ್ರದ ಕಥಾಹಂದರ.
‘ಪೌಡರ್’ ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್‌ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದು, ಕಾರ್ತಿಕ್ ಗೌಡ, ಯೋಗಿ ಜಿ. ರಾಜ್ ಮತ್ತು ವಿಜಯ್ ಸುಬ್ರಹ್ಮಣ್ಯಂ ಕೆ.ಆರ್.ಜಿ.ಸ್ಟೂಡಿಯೋಸ್ ಬ್ಯಾನರ್ ಅಡಿಯಲ್ಲಿ ಹಾಗೂ ಅರುನಭ್ ಕುಮಾರ್ ಟಿ.ವಿ.ಎಫ್. ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.