ADVERTISEMENT

ನಟಿ ಅಮೂಲ್ಯ ಬೇಬಿ ಬಂಪ್ ಫೋಟೊ ವೈರಲ್‌, ಅಭಿಮಾನಿಗಳಿಂದ ಮೆಚ್ಚುಗೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 8:58 IST
Last Updated 15 ಜನವರಿ 2022, 8:58 IST
ನಟಿ ಅಮೂಲ್ಯ ಜಗದೀಶ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ಬೇಬಿ ಬಂಪ್ ಫೋಟೊ
ನಟಿ ಅಮೂಲ್ಯ ಜಗದೀಶ್‌ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ಬೇಬಿ ಬಂಪ್ ಫೋಟೊ   

ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಜಗದೀಶ್‌ ಅವರು ತುಂಬು ಗರ್ಭಿಣಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅವರು ಬೇಬಿ ಬಂಪ್ ಫೋಟೊಶೂಟ್‌ ಮಾಡಿಸಿದ್ದು, ಇದೀಗ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತುಂಬು ಗರ್ಭಿಣಿಯಾಗಿರುವ ಅವರು ಪತಿ ಜಗದೀಶ್‌ ಜೊತೆಗೆ ಫೋಟೊಶೂಟ್ ಮಾಡಿಸಿದ್ದು, ಈ ಫೋಟೋಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹೃದಯದ ಎಮೋಜಿಯೊಂದಿಗೆ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಕೆಲ ದಿನಗಳ ಹಿಂದೆ ತಾವು ತಾಯಿಯಾಗುತ್ತಿರುವುದಾಗಿ ಅಮೂಲ್ಯ ಹೇಳಿದ್ದರು. ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡಿದ್ದ ಅವರು 'ನಾವೀಗ ಇಬ್ಬರೇ ಅಲ್ಲ' 2022ರಲ್ಲಿ ಮೂವರಾಗುತ್ತಿದ್ದೇವೆ ಎಂದು ಬರೆದುಕೊಂಡಿದ್ದರು.

ಅಮೂಲ್ಯ ಸ್ಯಾಂಡಲ್‍ವುಡ್‍ಗೆ ಬಾಲನಟಿಯಾಗಿ ಪದಾರ್ಪಣೆ ಮಾಡಿದರು. ಬಳಿಕ ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ನಟಿಯಾಗಿ ಮಿಂಚಿದರು.ಅಮೂಲ್ಯ 2017ರಲ್ಲಿ ಜಗದೀಶ್ ಅವರನ್ನು ಮದುವೆಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.