ಕಿರುತೆರೆಯ ಮೂಲಕ ಕನ್ನಡಿಗರ ಮನಗೆದ್ದ ಚೆಲುವೆ ಮೇಘಾ ಶೆಟ್ಟಿ ಸದ್ಯ ಚಂದನವನದಲ್ಲಿ ಸಿನಿಮಾ ಕೆಲಸಗಳ ಮಧ್ಯೆ ಬ್ಯುಸಿಯಾಗಿದ್ದಾರೆ
ಚಿತ್ರ ಕೃಪೆ: meghashetty_officiall
ಸದ್ಯ ಚೀತಾ ಮತ್ತು ಗ್ರಾಮಾಯಣ ಚಿತ್ರದ ಕೆಲಸಗಳಲ್ಲಿ ಮೇಘಾ ಶೆಟ್ಟಿ ತೊಡಗಿಸಿಕೊಂಡಿದ್ದಾರೆ
ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಮೇಘಾ ಶೆಟ್ಟಿ ಆಗಾಗ ಚೆಂದದ ಫೋಟೊ ಶೇರ್ ಮಾಡಿ ಅಭಿಮಾನಿಗಳ ಗಮನ ಸೆಳೆಯುತ್ತಾರೆ
ಈ ಬಾರಿ ಕಪ್ಪು ಬಣ್ಣದ ಸೀರೆಯುಟ್ಟು ಸಿಂಪಲ್ ಮೇಕಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ 'ತ್ರಿಬಲ್ ರೈಡಿಂಗ್' ಚಿತ್ರದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಮೇಘಾ ಚಂದನವನ ಪ್ರವೇಶಿಸಿದರು.
ಹೆಚ್ಚೇನು ಆಭರಣ ಧರಿಸದೆ ಸಿಂಪಲ್ ಲುಕ್‌ನಲ್ಲಿ ಮೇಘಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ
ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ಮತ್ತೆ ಅಭಿಮಾನಿಗಳ ಎದುರು ಕಾಣಿಸಿಕೊಳ್ಳುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.