
ಎಂ.ಆನಂದರಾಜ್ ನಿರ್ದೇಶನದ ‘Chef ಚಿದಂಬರ’ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.
ಎಐ ರೂಪದಲ್ಲಿ ಮೂಡಿಬಂದಿರುವ ‘ಪ್ರತಿ ಬಾರಿ ಮಿತಿ ಮೀರಿ...’ ಎನ್ನುವ ಲಿರಿಕಲ್ ಹಾಡಿಗೆ ಚಿತ್ರದ ನಾಯಕ ಅನಿರುದ್ಧ ಅವರೇ ಧ್ವನಿಯಾಗಿರುವುದು ವಿಶೇಷ. ಬಿಡುಗಡೆಯಾಗುತ್ತಿರುವ ಚಿತ್ರದ ಮೊದಲ ಹಾಡು ಇದಾಗಿದ್ದು, ಶ್ರೀಗಣೇಶ್ ಪರಶುರಾಮ್ ಸಾಹಿತ್ಯ ಹಾಡಿಗಿದೆ. ರಿತ್ವಿಕ್ ಮುರಳೀಧರ್ ಸಂಗೀತ ನೀಡಿರುವ ಈ ಹಾಡಿನ ಕೆಲವು ಭಾಗ ರ್‍ಯಾಪ್ ಶೈಲಿಯಲ್ಲಿದ್ದು, ಅದನ್ನು ರೋಹಿತ್ ಹಾಡಿದ್ದಾರೆ.
‘chef ಚಿದಂಬರ’ ಚಿತ್ರದ ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸ ಪೂರ್ಣವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರತಂಡ. ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ನಿರ್ಮಿಸಿರುವ ಈ ಚಿತ್ರಕ್ಕೆ ನಿರ್ದೇಶಕರೇ ಕಥೆ ಬರೆದಿದ್ದು, ಚಿತ್ರಕಥೆ ಹಾಗೂ ಸಂಭಾಷಣೆ ಗಣೇಶ್ ಪರಶುರಾಮ್ ಅವರದ್ದು. ಉದಯಲೀಲಾ ಛಾಯಾಚಿತ್ರಗ್ರಹಣ, ರಿತ್ವಿಕ್ ಮುರಳೀಧರ್ ಸಂಗೀತ ನಿರ್ದೇಶನ, ವಿಜೇತ್ ಚಂದ್ರ ಸಂಕಲನ, ‘ವಿಕ್ರಾಂತ್ ರೋಣ’ ಖ್ಯಾತಿಯ ಆಶಿಕ್ ಕುಸುಗೊಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಅನಿರುದ್ಧ ಅವರಿಗೆ ಜೋಡಿಯಾಗಿ ನಿಧಿ ಸುಬ್ಬಯ್ಯ ಹಾಗೂ ‘ಲವ್ ಮಾಕ್ಟೇಲ್’ ಖ್ಯಾತಿಯ ರೇಚೆಲ್ ಡೇವಿಡ್ ಅಭಿನಯಿಸಿದ್ದಾರೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.