
ತರುಣ್ ಸುಧೀರ್ ನಿರ್ದೇಶಿಸಿ, ದರ್ಶನ್ ಅಭಿನಯಿಸಿರುವ ‘ಕಾಟೇರ’ ಚಿತ್ರದ ಟ್ರೇಲರ್ ಬಿಡುಗಡೆಗೊಂಡಿದೆ. ಮಾಸ್, ಆ್ಯಕ್ಷನ್ ಭರಿತ ಟ್ರೇಲರ್‌ನಲ್ಲಿ ಅಮಾಯಕ ಯುವಕನಾಗಿ, ಅನ್ಯಾಯದ ವಿರುದ್ಧ ಹೋರಾಡುವವನಾಗಿ, ರೈತರಿಗೆ ಸ್ಪೂರ್ತಿ ತುಂಬುವ ವ್ಯಕ್ತಿಯಾಗಿ ಹಲವು ಶೇಡ್‌ಗಳಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ.
‘ಈ ಚಿತ್ರ ಇಂದಿರಾ ಗಾಂಧಿ ಕಾಲದ ಕಥೆ. 1974ರಲ್ಲಿ ಉಳುವವನೆ ಭೂಮಿಯ ಒಡೆಯ ಕಾನೂನು ಬಂದಾಗ ನಡೆದಿರುವ ಘಟನೆಯನ್ನು ಆಧರಿಸಿದೆ. ಆಗ ಬಾವಿಯೊಂದರಲ್ಲಿ ತುಂಬಾ ಜನರ ಮೂಳೆಗಳು ಸಿಕ್ಕಿದ್ದವು. ಆ ಮೂಳೆಗಳು ಯಾರವು ಎಂದು ಯಾರಿಗೂ ಗೊತ್ತಿಲ್ಲ. ಆ ಘಟನೆ ಕುರಿತು ಈ ಸಿನಿಮಾದಲ್ಲಿ ಹೇಳಲು ಹೊರಟಿದ್ದೇವೆ’ ಎಂದಿದ್ದಾರೆ ದರ್ಶನ್.
ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆದ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ರಾಕ್ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರ ಡಿ.29ರಂದು ತೆರೆ ಕಾಣುತ್ತಿದೆ. ಮಾಲಾಶ್ರೀ ಪುತ್ರಿ ಆರಾಧನಾ ದರ್ಶನ್‌ಗೆ ಜೋಡಿಯಾಗಿದ್ದಾರೆ. ಕುಮಾರ್ ಗೋವಿಂದ್, ಶ್ರುತಿ, ಜಗಪತಿ ಬಾಬು ಸೇರಿದಂತೆ ಹಲವು ನಟರು ಚಿತ್ರದಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.